ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತ ಚಲಾಯಿಸಲಿರುವ ಎರಡು ಲಕ್ಷ ಮತದಾರರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆಯಲಿರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸುಮಾರು ಎರಡು ಲಕ್ಷ ಮತದಾರರು ಮತ ಚಲಾಯಿಸಲಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 11 ಹಾಗೂ ಯಲಹಂಕ ತಾಲೂಕಿನ ವ್ಯಾಪ್ತಿಯಲ್ಲಿ ಒಟ್ಟು 15 ಗ್ರಾಮ ಪಂಚಾಯಿತಿಗಳಿವೆ.

ʼಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವ 233 ಸ್ಥಾನಗಳಿಗೆ 538 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ ಹಾಗೂ ಈಗಾಗಲೇ 32 ಸ್ಥಾನಗಳಲ್ಲಿ ಅಭ್ಯರ್ಥಿಗಳ ಅವಿರೋಧ ಆಯ್ಕೆಯೂ ಆಗಿದೆ. ಯಲಹಂಕ ವ್ಯಾಪ್ತಿಯಲ್ಲಿರುವ 298 ಸ್ಥಾನಗಳಿಗೆ 719 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ ಹಾಗೂ 25 ಸ್ಥಾನಗಳಲ್ಲಿ ಅಭ್ಯರ್ಥಿಗಳ ಅವಿರೋಧ ಆಯ್ಕೆ ಆಗಿದೆʼ ಎಂದು ಬೆಂಗಳೂರು ಗ್ರಾಮಾಂತರ ಪೋಲಿಸ್‌ ಆಯುಕ್ತರಾದ ಜಿ. ಎನ್‌, ಶಿವಮೂರ್ತಿ ಹೇಳಿದ್ದಾರೆ.

ಚುನಾವಣೆ ಹಿನ್ನಲೆಯಲ್ಲಿ  80,000 ಪೋಲಿಸರು, 10,969 ಗ್ರಹ ರಕ್ಷಕ ದಳ, 1746 ಸಂಚಾರಿ ವಾಹನಗಳು ಹಾಗೂ 111 ಕರ್ನಾಟಕ ರಾಜ್ಯ ಮೀಸಲು ಪಡೆಯ ತುಕಡಿಗಳನ್ನು ಮತ್ತು ಸ್ಥಳಿಯ ಸಶಸ್ತ್ರ ಮೀಸಲು ಪಡೆಗಳನ್ನು ನಿಯೋಜಿಸಲಾಗಿದೆ. ಕೊರೊನ ಮುಂಜಾಗ್ರತ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಪೋಲಿಸರಿಗೆ ಆದೇಶಿಸಲಾಗಿದೆ.

ವರದಿ: ಮಂಜುನಾಥ್‌ ನಾಯಕ್