ಗಂಗಾ ಕಲ್ಯಾಣ ಯೋಜನೆ ಶೀಘ್ರ ಅನುಷ್ಠಾನಕ್ಕೆ ಕ್ರಮ : ಗೋವಿಂದ ಕಾರಜೋಳ.
ಬೆಂಗಳೂರು : ವಿಧಾನ ಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಸಮಾಜ ಕಲ್ಯಾಣ ಸಚಿವ ಗೋವಿಂದ ಕಾರಜೋಳ, ಗಂಗಾ ಕಲ್ಯಾಣ ಯೋಜನೆಯಿಂದ ರೈತರಿಗೆ ಸಾಕಷ್ಟು ಅನುಕೂಲವಾಗಿದೆ.ಕೃಷಿ ಚಟುವಟಿಕೆ ಸಾಕಷ್ಟು ಹೆಚ್ಚಾಗಿದೆ. ಆದ್ರೆ ಯೋಜನೆಯ ಅನುಷ್ಠಾನದಲ್ಲಿ ಸಾಕಷ್ಟು ವಿಳಂಬವಾಗುತ್ತಿರುವುದು ಕಂಡುಬರುತ್ತಿದೆ.
ಇದರಿಂದ ರೈತರಿಗೆ ಸಾಕಷ್ಟು ಅನಾನುಕೂಲ ಉಂಟಾಗುತ್ತಿದೆ ಎಂದರು.
ಕೊಳವೆ ಬಾವಿ ತೊಡಿಸಿದ ನಂತರ ಪಂಪ್ ಅಳವಡಿಸಲು ಹಾಗೂ ವಿದ್ಯುತ್ ಸಂಪರ್ಕ ಕಲ್ಪಿಸಲು ಸಾಕಷ್ಟು ವಿಳಂಬವಾಗುತ್ತಿದೆ. ಆದ್ದರಿಂದ ಯೋಜನೆ ಸ್ವರೂಪ ಬದಲಿಸಲು ನಿರ್ಧಾರ ಕೈಗೊಳ್ಳಲಾಗಿದ್ದು,
ಕೊಳವೆಬಾವಿ ಕೊರೆಯುವುದರಿಂದ ಆರಂಭಿಸಿ, ವಿದ್ಯುತ್ ಸಂಪರ್ಕ ಕಲ್ಪಿಸಿ ನೀರು ಹೊರ ಬರುವವರೆಗೂ ಸಂಪೂರ್ಣವಾದ ಪ್ಯಾಕೇಜ್ ಟೆಂಡರ್ ನೀಡಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.
ವಿಧಾನಸಭೆ ಅಧಿವೇಶನದ ಪ್ರಶ್ನೋತ್ತರ ಸಮಯದಲ್ಲಿ ಬಿಜೆಪಿಯ ಅರಗ ಜ್ಞಾನೆಂದ್ರ ಅವರು ಗಂಗಾ ಕಲ್ಯಾಣ ಯೋಜನೆ ಕುರಿತು ಗೋವಿಂದ ಕಾರಜೋಳ ಗೆ ಪ್ರಶ್ನೆ ಕೇಳಿದ್ದರು.