1.jpeg)
ಸಂಪುಟ ವಿಸ್ತರಣೆ ನಾಳೆ ಸಿಗುತ್ತಾ ಮುಕ್ತಿ?
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಲೇ ಇದೆ. ಈಗಾಗಲೇ ಬಿಜೆಪಿ ನೂತನ ಶಾಸಕರು ಬಿ.ಎಸ್ ಯಡಿಯೂರಪ್ಪರನ್ನು ಭೇಟಿ ಮಾಡಿ ಈ ಕುರಿತಂತೆ ತಮ್ಮ ಅಸಮಾಧಾನ ತೋಡಿಕೊಂಡಿದ್ದಾರೆ. ಫೆಬ್ರವರಿ 17ನೇ ತಾರೀಕಿನಂದು ವಿಧಾನಸಭಾ ಜಂಟಿ ಅಧಿವೇಶನ ನಡೆಯಲಿದೆ. ಇದಕ್ಕೂ ಮುನ್ನವೇ ಸಂಪುಟ ವಿಸ್ತರಣೆ ಆಗಬೇಕೆಂದು ಸಿಎಂ ಬಿ.ಎಸ್ ಯಡಿಯೂರಪ್ಪಗೆ ಬಿಜೆಪಿ ನೂತನ ಶಾಸಕರು ಒತ್ತಡ ಹಾಕಿದ್ದಾರೆ. ಇದೀಗ ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿರುವ ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಹಸಿರು ನಿಶಾನೆ ತೋರುವ ಸಾಧ್ಯತೆ ಇದೆ. ಪ್ರಮುಖವಾಗಿ ನಾಳೆ ಅಮಿತ್ ಶಾ ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಪೌರತ್ವ ತಿದ್ದುಪಡಿ ಕಾಯ್ದೆ ವಿವಾದ ಮತ್ತಲವು ವಿಚಾರಗಳ ಬಗ್ಗೆ ರಾಜ್ಯ ನಾಯಕರೊಂದಿಗೆ ಚರ್ಚಿಸಲಿದ್ದಾರೆ ಎನ್ನುತ್ತಿವೆ ಮೂಲಗಳು.
ಶನಿವಾರ ಸಂಜೆ ಬೆಂಗಳೂರಿನ ಖಾಸಗಿ ಹೋಟೆಲ್ವೊಂದರಲ್ಲಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ರಾಜ್ಯ ಬಿಜೆಪಿ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಪ್ರಮುಖವಾಗಿ ಸಿಎಂ ಯಡಿಯೂರಪ್ಪ ಜತೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಿದ್ದಾರೆ