ಅರ್ಜುನ್ ಜನ್ಯ ಗೆ ಆಂಜಿಯೋಪ್ಲಾಸ್ಟಿ.

 

ಖ್ಯಾತ ಸಂಗೀತ ಸಂಯೋಜಕ ಅರ್ಜುನ್ ಜನ್ಯ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿ ದ್ದು, ಕೂಡಲೇ ಆಸ್ಪತ್ರೆಯಲ್ಲಿ ಆಂಜಿಯೋಪ್ಲಾಸ್ಟಿ ಮಾಡಲಾಗಿದೆ.ಮೈಸೂರಿನಲ್ಲಿ ಭಾನುವಾರ ರಾತ್ರಿ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಸಂಗೀತ ಸಂಯೋಜಕ ಮೈಸೂರಿನ ತಮ್ಮ ವಿಲ್ಲಾದಲ್ಲಿ ಇದ್ದಾಗ ನೋವು ಕಾಣಿಸಿಕೊಂಡಿದೆ. ಗ್ಯಾಸ್ಟಿಕ್ ಎಂದು ಅರ್ಜುನ್ ಜನ್ಯ ಭಾವಿಸಿದ್ದರು ಎನ್ನಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದಾಗ ಇಸಿಜಿಯಲ್ಲಿ ವ್ಯತ್ಯಾಸ ಕಂಡು ಬಂದಿದ್ದರಿಂದ ಕೂಡಲೇ ಚಿಕಿತ್ಸೆ ನೀಡಲಾಗಿದೆ. ಬುಧವಾರ ಮಧ್ಯರಾತ್ರಿ ಎರಡು ಗಂಟೆಗೆ ಕರೋನರಿ ಆಂಜಿಯೋಪ್ಲಾಸ್ಟಿ ಮಾಡಲಾಗಿದೆ. ಒಂದೆರಡು ಗಂಟೆ ತಡವಾಗಿ ದರು ಜೀವಕ್ಕೆ ಅಪಾಯವಿದೆ ಎಂದು ಗೊತ್ತಾಗಿದೆ. ಅರ್ಜುನ್ ಜನ್ಯ ಅವರಿಗೆ ಹೃದಯ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮೈಸೂರಿನ ಖಾಸಗಿ ಆಸ್ಪತ್ರೆಯ ಹೃದ್ರೋಗ ತಜ್ಞ ಆದಿತ್ಯ ಉಡುಪ ತಿಳಿಸಿದ್ದಾರೆ. ಈಗ ಅವರ ಆರೋಗ್ಯ ಸುಧಾರಿಸಿದೆ ಎಂದು ತಿಳಿದುಬಂದಿದೆ.

ಅರ್ಜುನ್ ಜನ್ಯ ಶಿಸ್ತಿನ ಜೀವನ ಶೈಲಿ ರೂಢಿಸಿಕೊಂಡಿದ್ದರು. ಆದರೂ ಹೃದಯಾಘಾತ ಸಂಭವಿಸಿರುವುದು ಎಲ್ಲರನ್ನು ಚಕಿತಗೊಳಿಸಿದೆ.