ಜೆಎನ್ ಯು ವಿದ್ಯಾರ್ಥಿಗಳ ಮೇಲಿನ ಹಲ್ಲೆಯನ್ನು ಖಂಡಿಸಿದ ಅರವಿಂದ್ ಕೇಜ್ರಿವಾಲ್...
ದೆಹಲಿ : ನಿನ್ನೆ ಜೆಎನ್ ಯು ವಿವಿಗೆ ಕೆಲವು ಮುಸುಕುಧಾರಿಗಳು ನುಗ್ಗಿ ಹಾಸ್ಟೆಲ್ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿರುವುದನ್ನು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಖಂಡಿಸಿದ್ದಾರೆ.
ವಿವಿ ಆವರಣದಲ್ಲಿ ನಡೆದಿರುವ ಘಟನೆ ಖಂಡನೀಯ. ಕೂಡಲೇ ದೆಹಲಿ ಪೋಲಿಸರು ವಿವಿ ಆವರಣದಲ್ಲಿ ಶಾಂತಿ ಕಾಪಾಡಬೇಕು. ವಿದ್ಯಾರ್ಥಿಗಳ ಮೇಲೆ ಯಾವುದೇ ರೀತಿಯ ದೌರ್ಜನ್ಯ ನಡೆಯದಂತೆ ಕ್ರಮ ಕೈಗೊಳ್ಳಬೇಕು. ವಿವಿ ಆವರಣದಲ್ಲೇ ವಿದ್ಯಾರ್ಥಿಗಳ ಮೇಲೆ ಹಲ್ಲೆಯಾದರೆ ದೇಶ ಪ್ರಗತಿ ಹೊಂದಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
ಇನ್ನು ಈ ಕುರಿತು ದೆಹಲಿ ಲೆಫ್ಟಿನೆಂಟ್ ಗವರ್ನರ್ ಅವರೊಂದಿಗೆ ಸಹ ಮಾತನಾಡಿದ್ದು , ವಿಶ್ವವಿದ್ಯಾನಿಲಯದ ಆವರಣದಲ್ಲಿ ಶಾಂತಿ ಕಾಪಾಡಲು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಇನ್ನು ನಿನ್ನೆ ನಡೆದ ಹಲ್ಲೆಯನ್ನು ಖಂಡಿಸಿ ವಿದ್ಯಾರ್ಥಿಗಳು ಇಂದು ಪ್ರತಿಭಟನೆ ನಡೆಸುತ್ತಿದ್ದು, ವಿವಿ ಆವರಣದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.
ಇನ್ನು ನಿನ್ನೆ ಕೆಲವು ದುಷ್ಕರ್ಮಿಗಳು ಮಾಸ್ಕ್ ಧರಿಕೊಂಡು ವಿವಿ ಆವರಣಕ್ಕೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ್ದರು. ಇನ್ನು ಇದು ಆರ್.ಎಸ್.ಎಸ್ ಹಾಗು ಎಬಿವಿಪಿ ಕಾರ್ಯಕರ್ತರ ಕೃತ್ಯ ಎಂದು ಜೆಎನ್ ಯು ವಿದ್ಯಾರ್ಥಿ ಒಕ್ಕೂಟ ಆರೋಪ ಮಾಡಿದೆ.