ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆ ಸತತ ಮೂರನೇ ಬಾರಿಯೂ ಮುಂದೂಡಿಕೆ...!
ಸತತ ಮೂರನೇ ಬಾರಿಗೆ ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆ ಮುಂದೂಡಿಕೆಯಾಗಿದೆ. 12 ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನಕ್ಕೆ ಇಂದು ಬೆಳಗ್ಗೆ 11.30ಕ್ಕೆ ಚುನಾವಣೆ ನಿಗದಿಯಾಗಿತ್ತು. 9.30ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. ಆದ್ರೆ ನಾಮಪತ್ರ ಸಲ್ಲಿಕೆ ಅವಧಿ ಮುಕ್ತಾಯವಾದ್ರೂ ಒಂದೇ ಒಂದು ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆ ಚುನಾವಣೆ ಮತ್ತೆ ಮುಂದೂಡಲ್ಪಟ್ಟಿದೆ.
ಆಡಳಿತ ಪಕ್ಷ ಬಿಜೆಪಿಯ ಆಂತರಿಕ ಕಿತ್ತಾಟದಿಂದ ಚುನಾವಣೆಗೆ ಯಾವುದೇ ಸದಸ್ಯರು ಭಾಗಿಯಾಗಿಲ್ಲ. ಕಾಂಗ್ರೆಸ್- ಜೆಡಿಎಸ್‌ನ ಉಚ್ಛಾಟಿತ ಸದಸ್ಯರು ಕೂಡ ತಮ್ಮ ಬೆಂಬಲಿಗರಿಗೆ ಅಧ್ಯಕ್ಷ ಸ್ಥಾನ ಸಿಗಬೇಕೆಂದು ಬೇಡಿಕೆ ಇಟ್ಟ ಹಿನ್ನೆಲೆ ಬಿಜೆಪಿ ನಾಯಕರಲ್ಲಿ ಒಮ್ಮತ ಮೂಡಿರಲಿಲ್ಲ. ಇಂದು ಚುನಾವಣೆ ಫಿಕ್ಸ್ ಆಗಿದ್ರು, ಸಮಿತಿ ಸದಸ್ಯರನ್ನ ಬಿಜೆಪಿ ಆಯ್ಕೆ ಮಾಡಿರಲಿಲ್ಲ.
ಪೇಜಾವರ ಶ್ರೀಗಳ ಅಗಲಿಕೆ ಹಿನ್ನೆಲೆ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಇರುವ ಕಾರಣ ಯಾವ ಸದಸ್ಯರು ಚುನಾವಣೆಯಲ್ಲಿ ಭಾಗವಹಿಸಿಲ್ಲ. ಚುನಾವಣೆಯಲ್ಲಿ ಭಾಗವಹಿಸಿ ಸಂಭ್ರಮಿಸುವುದು ಯೋಗ್ಯವಲ್ಲ. ಸದಸ್ಯರೇ ಚುನಾಣೆಯಿಂದ ಹಿಂದೆ ಸರಿದಿದ್ದಾರೆ ಅಂತ ಅವರು ತಿಳಿಸಿದ್ದಾರೆ.