
ದೆಹಲಿಯಲ್ಲಿ ನಿಲ್ಲದ ಹಿಂಸಾಚಾರ: ಸಾವಿನ ಸಂಖ್ಯೆ 7ಕ್ಕೆ ಏರಿಕೆ
ಅಮೇರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಆಗಮಿಸಿದ್ದಾರೆ. ಇತ್ತ ದೆಹಲಿಯಲ್ಲಿ ಸಿ.ಎ. ಎ ವಿರುದ್ಧದ ಹೋರಾಟದಲ್ಲಿ ಹಿಂಸಾಚಾರ ಭುಗಿಲೆದ್ದಿದೆ, ಸೋಮವಾರ ನಡೆದ ಗಲಭೆಯಲ್ಲಿ ಮೃತಪಟ್ಟವವರ ಸಂಖ್ಯೆ 7ಕ್ಕೆ ಏರಿದೆ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಸಂಜೆ ಆಗ್ರಾದ ತಾಜಮಹಲ್ಗೆ ಭೇಟಿ ನೀಡಿದ್ದರು. ಇದೇ ಸಂದರ್ಭದಲ್ಲಿ ಈಶಾನ್ಯ ದೆಹಲಿಯಲ್ಲಿ ಹಿಂಸಾಚಾರ ನಡೆದಿದೆ. ಎರಡು ಗುಂಪುಗಳು ಪರಸ್ಪರ ಕಲ್ಲು ತೂರಾಟ ನಡೆಸಿದ್ದು, ಈ ವೇಳೆ ಹೆಡ್ ಕಾನ್ಸ್ಟೇಬಲ್ ರತನ್ ಲಾಲ್ (42) ಸೇರಿ ನಾಲ್ವರು ಮೃತಪಟ್ಟಿದ್ದರು. 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿ ಆಗಿದೆ.
ಸದ್ಯ, ಈಶಾನ್ಯ ದೆಹಲಿಯಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ. ಈ ಭಾಗದಲ್ಲಿ ಕೆಲ ಮನೆ ಹಾಗೂ ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು, ಸದ್ಯ, ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ.