1.jpeg)
ಸಂಕ್ರಾಂತಿ ಬಳಿಕ ಸಂಪುಟ ವಿಸ್ತರಣೆ ಸಾಧ್ಯತೆ...?
ಸಂಕ್ರಾಂತಿ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡಲು ಸಿಎಂ ಯಡಿಯೂರಪ್ಪ ನಿರ್ಧಾರ ಮಾಡಿದ್ದಾರೆ.
ಈ ತಿಂಗಳ ಕೊನೆಯಲ್ಲಿ ಸಿಎಂ ಯಡಿಯೂರಪ್ಪ ವಿದೇಶ ಪ್ರವಾಸ ಕೈಗೋಳ್ಳಲಿದ್ದು ಅದಕ್ಕಿಂತ ಮುಂಚೆ
ಸಂಪುಟ ವಿಸ್ತರಣೆ ಮಾಡುವ ಆಲೋಚನೆಯಲ್ಲಿದ್ದಾರೆ. ಜನೇವರಿ 10 ರ ನಂತರ ಯಡಿಯೂರಪ್ಪ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಈ ಕುರಿತು ಚರ್ಚಿಸಲಿದ್ದಾರೆ. ನಂತರ ಕೋರ್ ಕಮಿಟಿ ಸಭೆ ನಡೆಸಿ ಸಂಪುಟಕ್ಕೆ ಸೇರ್ಪಡೆಯಾಗಲಿರುವ ಶಾಸಕರ
ಹೆಸರು ಘೋಷಿಸಲಿದ್ದಾರೆ.
ಎಲ್ಲಾ ಅಂದುಕೊಂಡಂತೆ ಆದರೆ ಜನೇವರಿ 16 ಅಥವಾ 17 ರಂದು ಸಚಿವ ಸಂಪುಟ ವಿಸ್ತರಣೆಯಾಗುವುದು ನಿಶ್ಚಿತ..