ಸಿ ಎ ಎ ಗಾಗಿ ಮನೆ ಮನೆಗೆ ಭೇಟಿ ಕೊಟ್ಟ ಕೇಂದ್ರ ಸಚಿವ .....!

ಹುಬ್ಬಳ್ಳಿ : ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಅಲ್ಪಸಂಖ್ಯಾತರಲ್ಲಿ ಮೂಡಿರುವ ಗೊಂದಲವನ್ನು ಹೋಗಲಾಡಿಸುವ ದೃಷ್ಟಿಯಿಂದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಹುಬ್ಬಳ್ಳಿಯಲ್ಲಿ ಜಾಗೃತಿ ಅಭಿಯಾನವನ್ನು ಹಮ್ಮಿಕೊಂಡಿದ್ದಾರೆ.

ನಗರದ ವೀರಾಪುರ ಓಣಿ, ಯಲ್ಲಾಪುರ ಓಣಿ ಸೇರಿದಂತೆ ಹುಬ್ಬಳ್ಳಿ- ಧಾರವಾಡ ಮೀಸಲು ಕ್ಷೇತ್ರವಾಗಿರುವ ಕ್ಷೇತ್ರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದರು.

 

ಪ್ರಹ್ಲಾದ ಜೋಶಿ ಅವರು ಮುಸ್ಲಿಂ ಸಮಾಜದವರ ಮನೆ ಮನೆಗೆ ತೆರಳಿ ಕಾಯ್ದೆಯ ಬಗ್ಗೆ ತಿಳಿವಳಿಕೆ ನೀಡಲು ಪ್ರಯತ್ನಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, "ಕಾಯ್ದೆಯಿಂದ ನಮ್ಮ ದೇಶದಲ್ಲಿ ವಾಸಿಸುವ ಜನರಿಗೆ ಯಾವುದೇ ತೊಂದರೆ ಇಲ್ಲ. ಒಂದೇ ಜಾತಿಯನ್ನು ಗುರಿಯಾಗಿಸಿಕೊಂಡು ಈ ಕಾಯ್ದೆ ತಂದಿಲ್ಲ. ಜೊತೆಗೆ ಕಾಯ್ದೆ ಕುರಿತು ಜನರಲ್ಲಿ ತಪ್ಪು ಕಲ್ಪನೆ ಮೂಡಿದ್ದು, ಅದನ್ನು ಹೋಗಲಾಡಿಸುವ ದೃಷ್ಟಿಯಿಂದ ಜನಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ" ಎಂದರು.

 

ಶಿವಕುಮಾರ ಮೆಣಸಿಣಕಾಯಿ, ರಂಗಾಬದ್ದಿ, ರಾಜು ಕೊರ್ಯಾಣುಠ ಸೇರಿದಂತೆ ಬಿಜೆಪಿಯ ಮುಖಂಡರು ಅಭಿಯಾನದಲ್ಲಿ ಪಾಲ್ಗೊಂಡಿದ್ದರು.