ಸಾಹಿತಿ , ಸಂಶೋಧಕ ಎಂ. ಚಿದಾನಂದ ಮೂರ್ತಿ ಇನ್ನಿಲ್ಲ.....

ಬೆಂಗಳೂರು : ವಯೋಸಹಜ ಅನಾರೋಗ್ಯ ದಿಂದ ಬಳಲುತ್ತಿದ್ದ  ಹಿರಿಯ ಸಾಹಿತಿ ಡಾ. ಎಂ. ಚಿದಾನಂದ ಮೂರ್ತಿ ಶನಿವಾರ ಬೆಳಿಗ್ಗೆ  ನಿಧನರಾಗಿದ್ದಾರೆ.

ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು,ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ 3.30 ರ ಸುಮಾರಿಗೆ  ಕೊನೆಯುಸಿರೆಳದಿದ್ದಾರೆ.

ಇನ್ನು ಚಿದಾನಂದ ಮೂರ್ತಿಯವರ ನಿಧನಕ್ಕೆ ಸಂತಾಪ ಸೂಚಿಸಿರುವ ಸಚಿವ ಸುರೇಶ ಕುಮಾರ್, ನಾಡಿನ ಹಿರಿಯ ಸಾಹಿತಿ , ಸಂಶೋಧಕ ವಿಶೇಷವಾಗಿ ಹಂಪಿಯ ಜೊತೆ ಬಹಳ ಆಪ್ತತೆ ಬೆಳೆಸಿಕೊಂಡಿದ್ದ, ಕನ್ನಡ ನಾಡಿನ ನೆಲ-ಜಲ- ಭಾಷೆ - ಸಂಸ್ಕ್ರತಿಯ ಕಾವಲುಗಾರನಂತಿದ್ದ ಚಿದಾನಂದ ಮೂರ್ತಿ ಇನ್ನಿಲ್ಲ ಎಂಬ ಸುದ್ದಿ ಆಘಾತ ತಂದಿದೆ. ಅವರ ಆತ್ಮಕ್ಕೆ ಸದ್ಗತಿ ದೊರಕಲಿ ಎಂದು ಟ್ವಿಟ್ ಮಾಡಿದ್ದಾರೆ.

ಚಿದಾನಂದ ಮೂರ್ತಿಯವರು ಕನ್ನಡದ ಲೇಖಕ, ವಿದ್ವಾಂಸ, ಸಂಶೋಧಕ ಹಾಗು ಇತಿಹಾಸಜ್ಞ. ಕನ್ನಡ ಭಾಷೆ ಹಾಗೂ ಕರ್ನಾಟಕದ ಇತಿಹಾಸದ ಕ್ಷೇತ್ರದಲ್ಲಿ ಪ್ರಸಿದ್ಧಿಯಾಗಿದ್ದಾರೆ. ಇವರು ಹಂಪಿಯ ಸ್ಮಾರಕಗಳನ್ನು ಉಳಿಸಲು ಹಾಗು ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನ ಗಳಿಸಲು ಮಾಡಿದ್ದ ಚಳವಳಿಗೆ ಪ್ರಸಿದ್ಧರಾಗಿದ್ದರು.