ರಾಜ್ಯದ ಎಲ್ಲ ಶಾಲೆಗಳಲ್ಲೂ ಸಂವಿಧಾನದ ಪೀಠಿಕೆ ಓದಲು ಸುತ್ತೋಲೆ...

ಬೆಂಗಳೂರು :  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿದಿನ ಪ್ರಾರ್ಥನಾ ಸಮಯದಲ್ಲಿ ಸಂವಿಧಾನದ ಪೀಠಿಕೆ ಓದಬೇಕು. ಮತ್ತು ಉಪಸ್ಥಿತರೆಲ್ಲರು ಅದನ್ನು ಪುನರುಚ್ಛಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಅಲ್ಲದೆ ,ತಮ್ಮ ವ್ಯಾಪ್ತಿಯಲ್ಲಿ ಬರುವ ಸಂವಿಧಾನ ತಜ್ಞರನ್ನು ಕರೆಸಿ ಸಂವಿಧಾನದ ಕುರಿತು ವಿಶೇಷ ಉಪನ್ಯಾಸ ಏರ್ಪಡಿಸಬೇಕು. ಆ ಮೂಲಕ ಮಕ್ಕಳಲ್ಲಿ ಸಂವಿಧಾನದ ಕುರಿತು ಅರಿವು ಮೂಡಿಸಬೇಕು ಎಂದು ಸುತ್ತೊಲೇಯಲ್ಲಿ ತಿಳಿಸಲಾಗಿದೆ.

2019 ಡಿಸೆಂಬರ್ 19 ರಂದು ಸಿಎಂ ಅಧ್ಯಕ್ಷತೆಯಲ್ಲಿ  ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿಯ ಪದಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದಂತೆ ಸುತ್ತೋಲೆ ಹೋರಡಿಸಲಾಗಿದೆ. ಸುತ್ತೋಲೆಯಲ್ಲಿನ ಎಲ್ಲ ನಿರ್ದೇಶನಗಳನ್ನು ತಪ್ಪದೇ ಪಾಲಿಸುವಂತೆ ಎಲ್ಲ ಅಧಿಕಾರಿಗಳು , ಶಾಲೆ ಮುಖ್ಯಸ್ಥರು ಹಾಗೂ ಶಿಕ್ಷಕರಿಗೆ ಸೂಚಿಸಲಾಗಿದೆ.