
9+3 ಸೂತ್ರ ಹಿಡಿದು ದೆಹಲಿಗೆ ಹಾರಿದ ರಾಜಹುಲಿ
ಬೆಂಗಳೂರು: ಬಹಳ ದಿನದಿಂದ ರಾಜ್ಯ ರಾಜಕಾರಣದಲ್ಲಿ ಬಹಳಷ್ಟು ಚರ್ಚೆಗೆ ಕಾರಣವಾಗಿದ್ದ ಸಚಿವ ಸಂಪುಟ ವಿಸ್ತರಣೆಗೆ ಪೂರ್ಣ ವಿರಾಮ ಹಾಕಲು ಮುಖ್ಯಮಂತ್ರಿ ಯಡಿಯೂರಪ್ಪ ಇಂದು ದೆಹಲಿಗೆ ತೆರಳಲಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಸಚಿವಕಾಂಕ್ಷಿಗಳು ಬಿಎಸ್ ವೈ ಮನೆ ಮುಂದೆ ದೌಡಾಯಿಸಿದ್ದಾರೆ. ಸಚಿವ ಸ್ಥಾನಕ್ಕಾಗಿ ಅಂತಿಮ ಹಂತದ ಕಸರತ್ತು ನಡೆಸುತ್ತಿದ್ದಾರೆ.
ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಯತ್ತ ಪ್ರಯಾಣ ಬೆಳೆಸಿದ ಸಿಎಂ ಬಿಎಸ್‌ವೈ ಗುರುವಾರ ರಾತ್ರಿ 9 ಗಂಟೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿಯಾಗಲಿದ್ದು 10 ಗಂಟೆಗೆ ಅಮಿತ್ ಶಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ