ಪತನದ ಅಂಚಿನಲ್ಲಿ ಕಮಲನಾಥ್ ಸರ್ಕಾರ....

ಭೋಪಾಲ್ : ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರದಲ್ಲಿ ಭಿನ್ನಮತ ತಾರಕಕ್ಕೇರಿದ್ದು, ಸದ್ಯ ಸರ್ಕಾರ ಪತನದ ಅಂಚಿಗೆ ಬಂದು ನಿಂತಿದೆ. ಮಧ್ಯಪ್ರದೇಶದ ಮುಖ್ಯಮಂತ್ರಿ
 ಕಮಲ್ ನಾಥ್ ಹಾಗೂ ಕಾಂಗ್ರೆಸ್ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ ನಡುವಿನ ತಿಕ್ಕಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಿಂಧಿಯ ಬೆಂಬಲಿಗರು ಎನ್ನಲಾಗುತ್ತಿರುವ 15 ಜನ ಅತೃಪ್ತ ಶಾಸಕರು ಬೆಂಗಳೂರಿಗೆ ಆಗಮಿಸಿದ್ದಾರೆ.

ಇನ್ನು ಬಿಜೆಪಿ ಕಾಂಗ್ರೆಸ್ ಶಾಸಕರಿಗೆ ಆಮಿಷವೋಡ್ದಿ ಸರ್ಕಾರ ಬೀಳಿಸಲು ಯತ್ನಿಸುತ್ತಿದೆ.ಹಾಗು ವಾಮ ಮಾರ್ಗದ ಮೂಲಕ ಅಧಿಕಾರದ ಗದ್ದುಗೆ ಏರಲು ಪ್ರಯತ್ನ ನಡೆಸುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಆದರೆ ಈ ಆರೋಪವನ್ನು ಬಿಜೆಪಿ ಮುಖಂಡರು ಸ್ಪಷ್ಟವಾಗಿ ಅಲ್ಲಗಳೆದಿದ್ದು, ಆಂತರಿಕ ಬಂಡಾಯದಿಂದ ಕಾಂಗ್ರೆಸ್ ಸರ್ಕಾರ ಪತನಗೋಳ್ಳುತ್ತಿದೆ ಎಂದಿದ್ದಾರೆ.

ಮಧ್ಯಪ್ರದೇಶ ಕ್ಷಿಪ್ರ ರಾಜಕೀಯ ಬೆಳವಣಿಗೆ ಬೆನ್ನ ಹಿಂದೆಯೇ ಬಿಜೆಪಿ ಹಿರಿಯ ಮುಖಂಡರು ದಿಲ್ಲಿಯಲ್ಲಿ ಅಮಿತ್ ಶಾ ನಿವಾಸದಲ್ಲಿ ಸೋಮವಾರ ರಾತ್ರಿ ತುರ್ತು ಸಭೆ ಸೇರಿ ಚರ್ಚೆ ನಡೆಸಿದರು.