ರಾಜ್ಯದಲ್ಲಿ ಮತ್ತೆ ಮೈತ್ರಿ......!

ಶಾಸಕ ರಿಷ್ವಾನ್ ಅರ್ಷದ್ ರಾಜೀನಾಮೆಯಿಂದ ತೆರವಾಗಿದ್ದ  ವಿಧಾನ ಪರಿಷತ್ ಸ್ಥಾನಕ್ಕೆ ಉಪಮುಖ್ಯಮಂತ್ರಿ ಲಕ್ಷಣ್ ಸವಾದಿ ಸ್ಪರ್ಧೆ ಮಾಡುತ್ತಿದ್ದಾರೆ. ಆದರೆ ಈಗ ಸವಾದಿಗೆ ಸೆಡ್ಡು ಹೊಡೆಯಲು ಕಾಂಗ್ರೆಸ್​-ಜೆಡಿಎಸ್​ ನಾಯಕರು ಮತ್ತೆ ಮೈತ್ರಿ ಮೊರೆ ಹೋಗಿದ್ದಾರೆ.

ಫೆಬ್ರವರಿ 17 ನೇ ತಾರಿಕಿನಂದು ನಡೆಯಲಿರುವ ಈ ಚುನಾವಣೆಗೆ ತಮ್ಮ ಅಭ್ಯರ್ಥಿ ಸ್ಪರ್ಧೆಯ ಕುರಿತು ನಿನ್ನೆಯ ತನಕ ಸೈಲೆಂಟ್ ಆಗಿ ಇದ್ದ ಕೈ-ತೆನೆ ನಾಯಕರು, ಇಂದು ಧಿಡೀರ್ ಆಗಿ ಮೈತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಲು ನಿರ್ದಾರ ಮಾಡಿರುವುದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ. 

ಈ ಕುರಿತು ಕಾಂಗ್ರೆಸ್ ಮುಖಂಡರು ಹಾಗೂ ಮಾಜಿ ಸಿಎಂ ಮಾತುಕತೆ ನಡೆಸಿದ್ದು,ಇಂದು ಮಧ್ಯಾಹ್ನದ ವೇಳೆಗೆ ಕಾಂಗ್ರೆಸ್​-ಜೆಡಿಎಸ್​ ಮೈತ್ರಿ ಅಭ್ಯರ್ಥಿಯಾಗಿ ಕೈ ಮುಖಂಡ ಅನಿಲ್ ಕುಮಾರ್ ನಾಮಪತ್ರ ಸಲ್ಲಿಸುವುದು ಬಹುತೇಕ ಖಚಿತವಾಗಿದೆ.