ಮೀಸಲಾತಿ ವಿಚಾರದಲ್ಲಿ ಕೇಂದ್ರ ಬಿಜೆಪಿ ನಡೆ ಖಂಡಿಸಿ ಕಾಂಗ್ರೆಸ್ ನಾಯಕರ ಪ್ರತಿಭಟನೆ .....

ಬೆಂಗಳೂರು : ಉದ್ಯೋಗ ನೇಮಕಾತಿ ಹಾಗೂ ಬಡ್ತಿಯಲ್ಲಿ ಮೀಸಲಾತಿ ನೀಡುವುದು ಮೂಲಭೂತ ಹಕ್ಕಲ್ಲ ಎಂಬ ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಕೇಂದ್ರ ಸರ್ಕಾರದ ಮಧ್ಯಸ್ಥಿಕೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಟೌನ್ ಹಾಲ್ ಬಳಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕರು ಕೂಡಲೇ ಕೇಂದ್ರ ಸರ್ಕಾರ ಈ ಪ್ರಕರಣದಲ್ಲಿ ಮಧ್ಯಪ್ರವೇಶಿಸಬೇಕು ಹಾಗೂ ಸದನದಲ್ಲಿ ಈ ಕುರಿತು ತಿದ್ದುಪಡಿ ತರಬೇಕು ಎಂದು ಆಗ್ರಹಿಸಿದರು.

ಇನ್ನು ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ  ಕಾಂಗ್ರೆಸ್ ನ ಹಲವು ಹಿರಿಯ ನಾಯಕರು ಭಾಗಿಯಾಗಿದ್ದರು.