ನಾಳೆ ರಾಜ್ಯಾದ್ಯಂತ ಕೋವಿಡ ಲಸಿಕೆ ಎರಡನೇ ಡ್ರೈ ರನ್
“ನಾಳೆ ರಾಜ್ಯದ 263 ಕಡೆಗಳಲ್ಲಿ ಕೊರೊನಾ ಲಸಿಕೆ ತಾಲೀಮು ನಡೆಸಲಾಗುವುದು. ಲಸಿಕೆ ತಾಲೀಮಿನಲ್ಲಿ ಆರೋಗ್ಯ ಕಾರ್ಯಕರ್ತರಿಗಗೂ ತರಬೇತಿ ನೀಡಲಾಗುವುದು” ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಹೇಳಿಕೆ ನೀಡಿದ್ದಾರೆ. 20 ಖಾಸಗಿ ಆಸ್ಪತ್ರೆ ಹಾಗೂ 43 ತಾಲೂಕು ಆಸ್ಪತ್ರೆಗಳಲ್ಲಿ ಕೊರೊನಾ ಲಸಿಕೆ ಡ್ರೈ ರನ್ ನಡೆಯಲಿದೆ. ಲಸಿಕೆಯಿಂದ ಯಾವುದೇ ಅಪಾಯ ಇಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಸ್ಪಷ್ಟನೆ ನೀಡಿದ್ದಾರೆ. ಕೇಂದ್ರದಿಂದ ಈಗಾಗಲೇ 24 ಲಕ್ಷ ಲಸಿಕೆಯ ಸಿರಿಂಜ್‌ಗಳು ರವಾನೆಯಾಗಿವೆ.
ಬೆಂಗಳೂರಿನಲ್ಲಿ ಒಟ್ಟು 8 ಕಡೆಗಳಲ್ಲಿ ಕೊರೊನಾ ಲಸಿಕೆ ತಾಲೀಮು ನಡೆಯಲಿದೆ. ನಗರದ ಪ್ರಾಥಮಿಕ ಆರೋಗ್ಯ ಕೇಂದ್ರ, ರೆಫೆರಲ್ ಆಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೆಂದ್ರಗಳಲ್ಲಿ ಡ್ರೈ ರನ್ ನಡೆಯಲಿದೆ ಎಂದು ಬಿಬಿಎಂಪಿ ಪ್ರಧಾನ ಆರೋಗ್ಯ ಅಧಿಕಾರಿ ವಿಜಯೇಂದ್ರ ತಿಳಿಸಿದ್ದಾರೆ.
ವರದಿ: ಮಂಜುನಾಥ ನಾಯಕ್