ಸಿಎಎ ಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ : ಸಂವಿಧಾನ ಪೀಠದಲ್ಲಿ ವಿಚಾರಣೆ : ಪ್ರತಿಕ್ರಿಯೆ ನೀಡಲು ಕೇಂದ್ರಕ್ಕೆ 4 ವಾರಗಳ ಗಡುವು...
ದೇಶಾದ್ಯಂತ ಭಾರಿ ಪ್ರತಿರೋಧದ ನಡುವೆ ಕೇಂದ್ರ ಸರ್ಕಾರ ಜಾರಿ ಮಾಡಿರುವ ಪೌರತ್ವ ತಿದ್ದುಪಡಿ ಕಾಯಿದೆ ತಕ್ಷಣ ತಡೆ ನೀಡಲು ಸುಪ್ರೀಮ್ ಕೋರ್ಟ್ ನಿರಾಕರಿಸಿದೆ.
ಪೌರತ್ವ ಕಾಯ್ದೆ ಸಿಂಧೂತ್ವ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ತ್ರಿಸದಸ್ಯ ಪೀಠ , ಕೇಂದ್ರ ಸರ್ಕಾರದಿಂದ ಪ್ರತಿಕ್ರಿಯೆ ಪಡೆಯುವವರೆಗೂ ಕಾಯಿದೆ ಜಾರಿಗೆ ತಡೆ ನೀಡಲಾಗದು ಎಂದು ಸ್ಪಷ್ಟ ಪಡಿಸಿತು.
ಈ ಬಗ್ಗೆ ಪ್ರತಿಕ್ರಿಯೆ ನೀಡಲು ಕೇಂದ್ರ ಸರ್ಕಾರಕ್ಕೆ ನಾಲ್ಕು ವಾರಗಳ ಸಮಯಾವಕಾಶ ನೀಡಿ, ನೋಟಿಸ್ ಜಾರಿ ಮಾಡಿತು. ಇನ್ನು ಪೌರತ್ವ ಕಾಯ್ದೆ ಕುರಿತು ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಪಂಚ ಸದಸ್ಯರ ಸಂವೀಧಾನ ಪೀಠದಲ್ಲಿ ನಡೆಸಲಾಗುವುದು ಎಂದು ನ್ಯಾಯಮೂರ್ತಿ ಎ.ಎಸ್. ಬೊಬ್ದೆ ನೇತೃತ್ವದ ನ್ಯಾಯ ಪೀಠ ಹೇಳಿತು.