ನಿರ್ಭಯ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಫಿಕ್ಸ್ ................
ನವದೆಹಲಿ: ನಿರ್ಭಯಾ ಅಪರಾಧಿಗಳಿಗೆ ಮರಣ ದಂಡನೆ ಮುಹೂರ್ತ ನಿಗದಿಯಾಗಿದೆ. ಜನವರಿ 22ರಂದು ಗಲ್ಲು ಶಿಕ್ಷೆ ಜಾರಿಗೊಳಿಸುವಂತೆ ದೆಹಲಿಯ ಪಟಿಯಲಾ ಹೌಸ್ ಕೋರ್ಟ್ ಆದೇಶಿಸಿದೆ.
ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳಿಗೆ ವಿಧಿಸಿರುವ ಮರಣ ದಂಡನೆಯ ಶೀಘ್ರ ಜಾರಿಗೆ ಆಗ್ರಹಿಸಿ ಸಂತ್ರಸ್ಥೆಯ ತಾಯಿ ಕೋರ್ಟ್ ಮೊರೆ ಹೋಗಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಾಲಯ ಜನವರಿ 22ರಂದು ಬೆಳಗ್ಗೆ 7 ಗಂಟೆಗೆ ಗಲ್ಲು ಶಿಕ್ಷೆ ಜಾರಿಗೊಳಿಸುವಂತೆ ಆದೇಶಿಸಿದೆ.