ರಶ್ಮಿಕಾ ಪೋಸ್ಟ್ ಗೆ ಅಸಭ್ಯವಾಗಿ ಕಮೆಂಟ್ ಮಾಡಿದ ಜಿಲ್ಲಾಧಿಕಾರಿ

ಇತ್ತೀಚೆಗೆ ರಶ್ಮಿಕಾ ಮಂದಣ್ಣ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮಕ್ಕೆ ಅವರು ಹಸಿರು ಬಣ್ಣದ ಸ್ಲಿಟ್ ಗೌನ್ ಧರಿಸಿ ಹಾಟ್ ಆಗಿ ಮಿಂಚಿದ್ದರು. ಈ ಕಾರ್ಯಕ್ರಮಕ್ಕೆ ಧರಿಸಿದ ಉಡುಪಿನಲ್ಲಿ ರಶ್ಮಿಕಾ ಫೋಟೋ ಕ್ಲಿಕ್ಕಿಸಿ ಅದನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು.

ರಶ್ಮಿಕಾಅವರ ಈ ಪೋಸ್ಟ್‌ಗೆ ತೆಲಂಗಾಣ ಜಗಿತ್ಯಾಲ ಜಿಲ್ಲಾಧಿಕಾರಿ ಅಸಭ್ಯವಾಗಿ ಕಮೆಂಟ್ ಮಾಡಿದ್ದಾರೆ. ಇದನ್ನು ನೋಡಿದ ನೆಟ್ಟಿಗರು, ನೀವು ದೊಡ್ಡ ಹುದ್ದೆಯಲ್ಲಿದ್ದು, ಈ ರೀತಿ ಕಮೆಂಟ್ ಮಾಡುವುದು ಸರಿಯಲ್ಲ ಎಂದು ಗರಂ ಆಗಿ ಜಿಲ್ಲಾಧಿಕಾರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.ಈ ವಿಷಯ ದೊಡ್ಡ ಸುದ್ದಿಯಾಗುತ್ತಿದ್ದಂತೆ ಜಿಲ್ಲಾಧಿಕಾರಿ ರವಿ ಪ್ರತಿಕ್ರಿಯಿಸಿದ್ದಾರೆ. ನಾನು ಈ ರೀತಿ ಕಮೆಂಟ್ ಮಾಡಲಿಲ್ಲ. ನನ್ನ ಟ್ವಿಟ್ಟರ್ ಹ್ಯಾಕ್ ಆಗಿದ್ದು, ಯಾರೋ ಕಿಡಿಗೇಡಿಗಳು ಈ ರೀತಿ ಕಮೆಂಟ್ ಮಾಡುತ್ತಿದ್ದಾರೆ. ಈ ಬಗ್ಗೆ ನಾನು ಪೊಲೀಸ್ ಠಾಣೆಯಲ್ಲಿ ದೂರು ಸಹ ನೀಡಿದ್ದೇನೆ ಎಂದು ಜಿಲ್ಲಾಧಿಕಾರಿ ರವಿ ಸ್ಪಷ್ಟನೆ ನೀಡಿದ್ದಾರೆ.