ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ಹೃದಯಾಘಾತ.
ಅರ್ಜುನ್ ಜನ್ಯ ಅವರಿಗೆ ಬುಧುವಾರ ಮಧ್ಯರಾತ್ರಿ ಹೃದಯಾಘಾತ ಸಂಭವಿಸಿದೆ. ಮೈಸೂರಿನ ಬೋಗಾದಿಯಲ್ಲಿರುವ ತಮ್ಮ ಮನೆಯಲ್ಲಿ ಈ ಘಟನೆ ಸಂಭವಿಸಿದ್ದು,ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಸೂಕ್ತ ಸಮಯದಲ್ಲಿ ಆಸ್ಪತ್ರೆಗೆ ದಾಖಲಿಸಿದ್ದರಿಂದ ಅರ್ಜುನ ಜನ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯಕ್ಕೆ ಅವರ ಆರೋಗ್ಯದ ಬಗ್ಗೆ ಹೆಚ್ಚಿನ ಮಾಹಿತಿ ಸಿಗಬೇಕಾಗಿದೆ.
39 ವರ್ಷದ ಅರ್ಜುನ್ ಜನ್ಯ ಹಲವು ಸಿನಿಮಾಗಳಿಗೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.ಜೊತೆಗೆ ರಿಯಾಲಿಟಿ ಶೋಗಳಲ್ಲೂ ಜಡ್ಜ್ ಆಗಿ ಭಾಗವಹಿಸುತ್ತಿದ್ದಾರೆ.ಹಲವು ಸೂಪರ್ ಹಿಟ್ ಗೀತೆಗಳನು ನೀಡಿರುವ ಅವರಿಗೆ ಅಪಾರ ಸಂಖ್ಯೆಅಭಿಮಾನಿಗಳಿದ್ದಾರೆ.ಕನ್ನಡ ಜನಪ್ರಿಯ ನಟರ ಸಿನಿಮಾಗಳಿಗೆ ಸಂಗೀತ ಸಂಯೋಜನೆ ಮಾಡುವ ಮೂಲಕ ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ.