ಸಾರಿಗೆ ಸಂಸ್ಥೆ ಸಿಬ್ಬಂದಿಗಳಿಂದ ಇಂದು ಉಪವಾಸ ಸತ್ಯಾಗ್ರಹ.....
ಬೆಂಗಳೂರು : ರಾಜ್ಯ ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಒತ್ತಾಯಿಸಿ ಇಂದು ನಗರದ ಫ್ರೀಡಂ ಪಾರ್ಕ್ ನಲ್ಲಿ ಕೆಎಸ್ಆರ್ ಟಿಸಿ ಹಾಗೂ ಬಿಎಂಟಿಸಿ ನೌಕರರು ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ.
ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಸತ್ಯಾಗ್ರಹ ನಡೆಯಲಿದ್ದು, ಸತ್ಯಾಗ್ರಹದಲ್ಲಿ ಸಾರಿಗೆ ಸಂಸ್ಥೆಯ ಸಿಬ್ಬಂದಿ ಹಾಗೂ ಅವರ ಕುಟುಂಬ ಸದಸ್ಯರು ಭಾಗಿಯಾಗಲಿದ್ದಾರೆ.ಇನ್ನು ಹಿರಿಯ ಸಾಹಿತಿ ಪಾಟೀಲ್ ಪುಟ್ಟಪ್ಪ ಸಹ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.
ಬಜೆಟ್ ನಲ್ಲಿ ನಮ್ಮ ಬೇಡಿಕೆ ಈಡೇರಿಸಡಿದ್ದರೆ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್ ತಿಳಿಸಿದ್ದಾರೆ.
ವರ್ಷದ ಆರಂಭದಲ್ಲಿ ಜಗನ್ ಸರ್ಕಾರ, ಆಂಧ್ರ ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಿ ಆದೇಶ ಹೊರಡಿಸಿತ್ತು. ಅದೇ ಮಾದರಿಯನ್ನು ರಾಜ್ಯದಲ್ಲೂ ಅಳವಡಿಸಿಕೊಳ್ಳುವಂತೆ ರಾಜ್ಯ ಸಾರಿಗೆ ನೌಕರರು ಸರ್ಕಾರವನ್ನು ಆಗ್ರಹಿಸುತ್ತಿದ್ದಾರೆ.