ಕುಡಿತಕ್ಕೆ ಹಣ ನೀಡಿಲ್ಲವೆಂದು ಕೊಡಲಿಯಿಂದ ಹಲ್ಲೆ ಮಾಡಿ ಪತ್ನಿಯನ್ನೇ ಕೊಂದ ಪತಿರಾಯ...
ದಾವಣಗೆರೆ : ಕುಡಿತದ ಚಟಕ್ಕೆ ದಾಸನಾಗಿದ್ದ ಪತಿಯೊಬ್ಬ ಕುಡಿಯಲು ಹಣ ನೀಡದ ತನ್ನ ಪತ್ನಿಯನ್ನು ಕೊಡಲಿಯಿಂದ ಹಲ್ಲೆ ಮಾಡಿ ಕೊಂದಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಮೃತ ಪಟ್ಟ ಮಹಿಳೆ ದಾವಣಗೆರೆ ನಿವಾಸಿ 38 ವರ್ಷದ ಉಷಾ ಎಂದು ಗುರುತಿಸಲಾಗಿದ್ದು, ಈಕೆಯ ಪತಿ ಜಯಪ್ಪ (38) ಕೊಲೆಗೈದಿರುವ ಆರೋಪಿ.
ಪತಿ ಕುಡಿತ ಚಟಕ್ಕೆ ದಾಸನಾಗಿದ್ದ ಕಾರಣ ಉಷಾ ದುಡಿದು ಮಕ್ಕಳನ್ನು ಸಾಕುತ್ತಿದ್ದರು. ಕಳೆದ ರಾತ್ರಿ ಕುಡಿದು ಬಂದ ಜಯಪ್ಪ ಪತ್ನಿ ಉಷಾ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿದ್ದಾನೆ. ಪರಿಣಾಮ ಉಷಾ ಪ್ರಜ್ಞೆ ತಪ್ಪಿ ನೆಲಕ್ಕೆ ಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಉಷಾ ಮೃತಪಟ್ಟಿದ್ದಾರೆ.
ಇನ್ನು ಈ ಸಂಭಂಧ ದಾವಣಗೆರೆ ಮಹಿಳಾ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.