ಇಂದು ಕರ್ನಾಟಕ ಬಂದ್ : ಏನಿರುತ್ತೆ?...ಏನಿರೆಲ್ಲ..?
ಇಂದು ರಾಜ್ಯಾದ್ಯಂತ ಕರ್ನಾಟಕ ಬಂದ್, 600ಕ್ಕೂ ಹೆಚ್ಚು ಸಂಘಟನೆಗಳ ಬೆಂಬಲ ಸರೋಜಿನಿ ಮಹಿಷಿ ವರದಿ ಜಾರಿಗೆ ತೀವ್ರ ಪಟ್ಟು.
ಸರ್ಕಾರಿ ಮತ್ತು ಖಾಸಗಿ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಡಾಕ್ಟರ್ ಸರೋಜಿನಿ ಮಹಿಷಿ ವರದಿ ಜಾರಿ ಅತ್ಯಗತ್ಯವಾಗಿದ್ದೆ.
ಈ ಕುರಿತು ಸರ್ಕಾರದ ಮೇಲೆ ಒತ್ತಡ ಹೇರಲು ಫೆಬ್ರುವರಿ 13 ರಂದು ರಾಜ್ಯದ್ಯಂತ ಬಂದ್ ಮಾಡಲು 600ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ.
ಈ ಬಂದ್ ಇಂದ ಏನೇನು ಇರಲಿದೆ ಯಾವ ವ್ಯವಸ್ಥೆಯಲ್ಲಿ ವ್ಯತ್ಯಯ ಇರಲಿದೆ.?
ಓಲಾ ಉಬರ್ ಖಾಸಗಿ ಬಸ್ಸುಗಳ ಸಂಘಟನೆಗಳು ನೇರವಾಗಿ ಬಂದ್ ಗೆ ಬೆಂಬಲ ಸೂಚಿಸಿವೆ ಆದರೆ ಕೆಎಸ್ಸಾರ್ಟಿಸಿ, ಬಿಎಂಟಿಸಿ, ನಮ್ಮ ಮೆಟ್ರೋ,ಸಂಚಾರದಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾಗುವುದಿಲ್ಲ.
ಸಾರಿಗೆ ನಿಗಮಗಳ ಕಾರ್ಮಿಕರ ಒಕ್ಕೂಟ ಕರ್ನಾಟಕ ಬಂದ್ಗೆ ನೈತಿಕವಾಗಿ ಬೆಂಬಲ ಸೂಚಿಸಿವೆ. ಆದರೆ ಸಾರಿಗೆ ವ್ಯವಸ್ಥೆ ಬಂದ್ ಮಾಡಿ ತೊಂದರೆ ಕೊಡುಲು ಇಚ್ಚೆಇಲ್ಲ ಎಂದು ಒಕ್ಕೂಟ ಹೇಳಿದ್ದು. ಎಂದಿನಂತೆ ರಾಜ್ಯಾದ್ಯಂತ ಕೆಎಸ್ಆರ್ಟಿಸಿ ಬಸ್ ಸಂಚಾರ ಇರಲಿದೆ.
ಗುರುವಾರ ಯಾವುದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ ಸಾರ್ವಜನಿಕ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ. ಅತಿಕ್ರಮ ವಹಿಸಬಹುದು ಆಯಾ ಜಿಲ್ಲೆಗಳ ಸ್ಥಳೀಯ ಪರಿಸ್ಥಿತಿಗಳಿಗೆ ಅನುಗುಣವಾಗಿ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚಿಸಿದ್ದಾರೆ.
ಪ್ರಥಮ ಪಿಯುಸಿ ಅಂತಿಮ ಪರೀಕ್ಷೆಗಳು ನಡೆಯುತ್ತಿರುವುದರಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಬಹುದು. ಹೀಗಾಗಿ ಪರಿಸ್ಥಿತಿ ಅವಲೋಕಿಸಿ ನಿರ್ಧಾರ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ