ರೈತರಿಗೆ ಭರ್ಜರಿ ಕೊಡುಗೆ ನೀಡಿದೆ ರಾಜ್ಯ ಸರ್ಕಾರ ದಿನಕ್ಕೆ 7 ಗಂಟೆ ವಿದ್ಯುತ್.!!
ಹಲವು ತಾಂತ್ರಿಕ ಸಮಸ್ಯೆಗಳಿಂದಾಗಿ ಪ್ರತಿನಿತ್ಯ 9 ಗಂಟೆಗಳ ಕಾಲ ವಿದ್ಯುತ್ ಪೂರೈಸಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಮೇಲ್ಮನೆಯಲ್ಲಿ ಮಾತನಾಡಿದ ಅವರು ರೈತರಿಗೆ ಕೃಷಿ ಚುಟವಟಿಕೆಗಳಿಗಾಗಿ ನಿತ್ಯ, 9 ಗಂಟೆಗಳ ಕಾಲ ವಿದ್ಯುತ್ ಪೂರೈಸಲು ಸಾಧ್ಯವಾಗುವುದಿಲ್ಲ, ಆದರೆ 7 ಗಂಟೆ ಪವರ್ ನೀಡಲಾಗುವುದು ಎಂದರು.
ಕೆಲವರು 7ಎಚ್‌ಪಿ ಬದಲು 15 ಎಚ್‌ಪಿ ಪಂಪ್‌ಸೆಟ್‌ಗಳನ್ನು ಬಳಕೆ ಮಾಡುತ್ತಿರುವುದು ಟ್ರಾನ್ಸ್‌ಫಾರ್ಮರ್ ಸಮಸ್ಯೆಗೆ ಒಂದು ಕಾರಣವಾಗಿದೆ. ಸರಕಾರ ಪ್ರತಿ ದಿನ 7 ಗಂಟೆಗಳ ಕಾಲ ವಿದ್ಯುತ್ ಸಂಪರ್ಕ ಕಲ್ಪಿಸಲಿದೆ. ಆದರೆ 120 ಕಡೆ ವಿದ್ಯುತ್ ಸಮಸ್ಯೆ ಇರುವುದು ನಿಜ. ಈ ಸಮಸ್ಯೆಯನ್ನು ಸರ್ಕಾರ ಶೀಘ್ರದಲ್ಲಿಯೇ ಬಗೆಹರಿಸಲಿದೆ ಎಂದರು.