ರಾಜ್ಯದಲ್ಲಿ ಕೊರೋನಾಗೆ ಮೊದಲ ಬಲಿ:ತುರ್ತು ಸಭೆ ಕರೆದ ಸಚಿವ ಶ್ರೀರಾಮುಲು
ಕಲ್ಬುರ್ಗಿಯಲ್ಲಿ ಕೊರೋನಾ ಸೋಂಕಿಗೆ ತುತ್ತಾಗಿದ್ದ 76 ವರ್ಷದ ವೃದ್ಧ ಗುರುವಾರ ಮೃತರಾಗಿದ್ದಾರೆ. ಮೃತ ವ್ಯಕ್ತಿ ಕೊರೋನಾ ಸೋಂಕಿನಿಂದ ಬಳಲಿದ್ದು ಸತ್ಯ ಎಂದು ಅರೋಗ್ಯ ಇಲಾಖೆ ದೃಢಪಡಿಸಿರುವ ಬೆನ್ನಲ್ಲೆ ಇಡೀ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.
ರಾಜ್ಯದ ಆರೋಗ್ಯ ಸಚಿವ ಶ್ರೀರಾಮುಲು ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ಮಹತ್ವದ ಸಭೆ ಕರೆಯಲಾಗಿದೆ. ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಈ ಸಭೆಯಲ್ಲಿ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದು, ಕೊರೋನಾ ನಿಯಂತ್ರಣದ ಕುರಿತು ಚರ್ಚೆ ನಡೆಸಲಿದ್ದಾರೆ. ಅಲ್ಲದೆ, ಜಿಲ್ಲೆಯಾದ್ಯಂತ ಎಲ್ಲೆಡೆ ಕೊರೋನಾ ಸೋಂಕಿತರನ್ನು ಗುರುತಿಸಿ ಸೂಕ್ತ ಚಿಕಿತ್ಸೆ ನೀಡಲು ಜಿಲ್ಲಾವಾರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಕ್ತ ಸೂಚನೆ ರವಾನಿಸಲಿದ್ದಾರೆ ಎನ್ನಲಾಗುತ್ತಿದೆ.