ತೇಜಸ್ವಿ ಸೂರ್ಯ, ಸೂಲಿಬೆಲೆ ಯುಗಪರುಷರೇ?: ಕುಮಾರಸ್ವಾಮಿ ಲೇವಡಿ
ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ಪರ ನಗರದಲ್ಲಿ ನಡೆದ ಕಾರ್ಯಕ್ರಮದ ವೇಳೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಯುವ ಬ್ರಿಗೇಡ್ ಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರ ಹತ್ಯೆಗೆ ಪ್ರಯತ್ನ ನಡೆದಿತ್ತು ಎಂಬುದನ್ನು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.
ತೇಜಸ್ವಿ ಸೂರ್ಯ ಮತ್ತು ಚಕ್ರವರ್ತಿ ಸೂಲಿಬೆಲೆ ಅವರ ಹತ್ಯೆಗೆ ಸಂಚು ನಡೆದಿದೆ ಎಂಬ ಸುದ್ದಿ ಕೇಳಿದೆ. ಅವರಿಬ್ಬರೇನು ಯುಗ ಪುರುಷರೇ? ಅವರ ಸಾಧನೆಯಾದರೂ ಏನು? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ನಗರದ ಮಿಲ್ಲರ್ಸ್ ರಸ್ತೆಯ ಖುದ್ದೂಸ್ ಸಾಹೇಬ್ ಈದ್ಗಾ ಮೈದಾನದ ಮಸೀದಿ ಸಭಾಂಗಣದಲ್ಲಿ ಶುಕ್ರವಾರ ಕರ್ನಾಟಕ ಜಾಯಿಂಟ್ ಆಕ್ಷನ್ ಕಮಿಟಿ ಆಯೋಜಿಸಿದ್ದ ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ಕುರಿತ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಮಾತಾಡಿದರು.