ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಮಲನಾಥ್ ಸಂಪುಟ ಸದಸ್ಯರು : ಇದು ಕಾಂಗ್ರೆಸ್ ಆಂತರಿಕ ವಿಚಾರ ಎಂದ ಶಿವರಾಜ್ ಸಿಂಗ್ ಚೌಹಾಣ್..
ಭೋಪಾಲ್ : ಮಧ್ಯಪ್ರದೇಶದಲ್ಲಿ ನಡೆಯುತ್ತಿರುವ ಕ್ಷಿಪ್ರ ರಾಜಕೀಯ ಬೆಳವಣಿಗೆಯಿಂದಾಗಿ ಮುಖ್ಯಮಂತ್ರಿ ಕಮಲನಾಥ್ ಸಂಪುಟದ ಎಲ್ಲಾ ಸಚಿವರು ಸೋಮವಾರ ರಾತ್ರಿ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಸಿಂಧಿಯಾ ಬೆಂಬಲಿಗರು ಬೆಂಗಳೂರಿಗೆ ಬಂದು ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿರುವ ಬೆನ್ನಲ್ಲೇ ಮಧ್ಯಪ್ರದೇಶ ಸರ್ಕಾರದ 20 ಸಚಿವರು ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಸಿಂಧಿಯಾ ಬೆಂಬಲಿಗರಿಗೆ ಸಂಪುಟದಲ್ಲಿ ಸ್ಥಾನ ಕಲ್ಪಿಸುವುದು, ಆ ಮೂಲಕ ಸರ್ಕಾರವನ್ನು ಉಳಿಸುವ ಕೊನೆ ಪ್ರಯತ್ನವನ್ನು ಕಮಲನಾಥ್ ನಡೆಸುತ್ತಿದ್ದಾರೆ.
ಇನ್ನು ಈ ಎಲ್ಲಾ ಬೆಳವಣಿಗೆಗಳ ಕುರಿತು ಪ್ರತಿಕ್ರಿಯಿಸಿರುವ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್," ಇದು ಕಾಂಗ್ರೆಸ್ ನ ಆಂತರಿಕ ವಿಚಾರ. ನಾನು ಇದರ ಬಗ್ಗೆ ಮಾತನಾಡೊದಿಲ್ಲ. ಸರ್ಕಾರವನ್ನು ಬೀಳಿಸುವ ಕೆಲಸಕ್ಕೆ ನಾವು ಕೈ ಹಾಕುವುದಿಲ್ಲ." ಎಂದು ಹೇಳಿದ್ದಾರೆ.