ವಿಶ್ವಸಂಸ್ಥೆ ಮಧ್ಯಪ್ರವೇಶಕ್ಕೆ ಮಮತಾ ಆಗ್ರಹ......
ಕಲ್ಕತ್ತಾ : ಕೇಂದ್ರ ಸರ್ಕಾರ ಜಾರಿಗೆ ಮುಂದಾಗಿರುವ ಪೌರತ್ವ ಕಾಯ್ದೆ ತಿದ್ದುಪಡಿ ವಿರುದ್ಧ ದಿನೇ ದಿನೇ ಆಕ್ರೋಶ ಹೆಚ್ಚಾಗುತ್ತಿದ್ದು, ಪ್ರತಿಭಟನೆಗಳು ಹಿಂಸಾಚಾರದ ರೂಪ ಪಡೆದಿವೆ. ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ನಿಷೇದಾಜ್ಞೆಯನ್ನು ಜಾರಿಗೊಳಿಸಲಾಗಿದೆ.
ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪೌರತ್ವ ತಿದ್ದುಪಡಿ ಕಾಯ್ದೆಯ ವಿಚಾರದಲ್ಲಿ ವಿಶ್ವಸಂಸ್ಥೆ ಮಧ್ಯಪ್ರವೇಶಿಸಬೇಕು. ಹಾಗೂ ಕಾಯ್ದೆಯ ಕುರಿತು ಜನಮತ ಪರಿಗಣಿಸಬೇಕೆಂದು ಆಗ್ರಹಿಸಿದ್ದಾರೆ.
ಸದ್ಯ ದೇಶದೆಲ್ಲೆಡೆ ಪೌರತ್ವ ಕಾಯ್ದೆಯ ಕಿಚ್ಚು ಸದ್ಯಕ್ಕೆ ಆರುವ ಲಕ್ಷಣ ತೋರುತ್ತಿಲ್ಲ. ಹಲವು ರಾಜ್ಯಗಳಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು,
ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.