ಅಂತೂ ಕೂಲ್ ಆಯ್ತು ಮಂಗಳೂರು...!
ಮಂಗಳೂರು:ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಯಿಂದ ಪೊಲೀಸರ ಗೋಲಿಬಾರ್‌ಗೆ ಇಬ್ಬರು ಬಲಿಯಾಗಿ ಉದ್ವಿಗ್ನಗೊಂಡಿದ್ದ ಮಂಗಳೂರಿನಲ್ಲಿ ಶನಿವಾರ ಬೆಳಗ್ಗೆಯಿಂದ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿದೆ.
ಇಲ್ಲಿನ ಪ್ರಮುಖ ರಸ್ತೆಗಳಲ್ಲಿ ಅಲ್ಲಲ್ಲಿ ಸಣ್ಣಪುಟ್ಟ ಅಂಗಡಿಗಳು ತೆರೆದಿದ್ದು, ವಾಹನ ಸಂಚಾರ ಆರಂಭಗೊಂಡಿದೆ. ಕೆಲವು ಪೆಟ್ರೋಲ್ ಬಂಕ್‌ಗಳು ಮುಂಜಾನೆಯೇ ತೆರೆದಿದ್ದು ಎಂದಿನಂತೆ ವಹಿವಾಟು ನಡೆಸಿವೆ. ಗ್ರಾಹಕರು ಸರತಿ ಸಾಲಿನಲ್ಲಿ ಪೆಟ್ರೋಲ್ ತುಂಬಿಸಿಕೊಳ್ಳುತ್ತಿದ್ದಾರೆ. ಹೋಟೆಲ್‌ಗಳತ್ತ ಜನರು ಬರುತ್ತಿರುವುದು ಕಂಡು ಬಂದಿದೆ. ಸರ್ಕಾರಿ ಬಸ್ಸು ಹಾಗೂ ಖಾಸಗಿ ಬಸ್ಸುಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಆಟೋ ಹಾಗೂ ದ್ವಿಚಕ್ರವಾಹನಗಳ ಸಂಚಾರ ಹೆಚ್ಚಾಗಿರುವುದು ಕಂಡು ಬಂದಿದೆ.