ಇಂದು ದೇಶಾದ್ಯಂತ ಮುಷ್ಕರ : ಎಂದಿನಂತೆ ಸಂಚರಿಸಲಿವೆ ಸಾರಿಗೆ ವಾಹನಗಳು : ಶಾಲಾ - ಕಾಲೇಜೀಗೂ ರಜೆ ಇಲ್ಲ.

ಇಂದು ದೇಶಾದ್ಯಂತ ಮುಷ್ಕರ :  ಎಂದಿನಂತೆ ಸಂಚರಿಸಲಿವೆ ಸಾರಿಗೆ ವಾಹನಗಳು : ಶಾಲಾ - ಕಾಲೇಜೀಗೂ ರಜೆ ಇಲ್ಲ.

ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರೋಧಿಸಿ ದೇಶದ ಹಲವು ಕಾರ್ಮಿಕ ಸಂಘಟನೆಗಳು ಇಂದು ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿವೆ.

ಇನ್ನು ಇದು ಕೇವಲ ಮುಷ್ಕರವಾಗಿದ್ದು ,ಬಂದ್ ಮಾಡುತ್ತಿಲ್ಲ ಎಂದು ಕಾರ್ಮಿಕ ಸಂಘಟನೆಗಳು ಸ್ಪಷ್ಟನೆ ನೀಡಿವೆ. ಇನ್ನು ಇವತ್ತಿನ ಮುಷ್ಕರಕ್ಕೆ ಆಟೋ ,ಟ್ಯಾಕ್ಸಿ ಹಾಗೂ ಸಾರಿಗೆ ವಾಹನಗಳು ಕೇವಲ ಬಾಹ್ಯ ಬೆಂಬಲ ಮಾತ್ರ ನೀಡಿದ್ದು , ಸಾರಿಗೆ ಸಂಚಾರದಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ. ಇನ್ನು ಶಾಲಾ -  ಕಾಲೇಜಿಗೂ ರಜೆ ಘೋಷಿಸದ ಕಾರಣ ಎಂದಿನಂತೆ ಕಾರ್ಯನಿರ್ವಹಿಸಲಿವೆ.

ಆದರೆ ಬ್ಯಾಂಕ್ ಗಳ ವಿಲೀನ ಪ್ರಕ್ರಿಯೆ ಹಾಗೂ ಕೇಂದ್ರ ಸರ್ಕಾರದ ಜನವಿರೋಧಿ ಕಾನೂನುಗಳನ್ನು ವಿರೋಧಿಸಿ ಬ್ಯಾಂಕ್ ನೌಕರರು ಮುಷ್ಕರದಲ್ಲಿ ಭಾಗವಹಿಸುತ್ತಿರುವ ಕಾರಣ ಬ್ಯಾಂಕಿಂಗ್ ಸೇವೆ ಸ್ಥಗಿತಗೋಳ್ಳುವ ಸಾಧ್ಯತೆ ಇದೆ.

ಇನ್ನು ರಾಜ್ಯ ಸಾರಿಗೆ ಸಂಸ್ಥೆಯ ಕೆಎಸ್ ಆರ್ ಟಿಸಿ ಹಾಗೂ ಬಿಎಂಟಿಸಿ ವಾಹನಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಕರ್ತವ್ಯಕ್ಕೆ ಗೈರು ಹಾಜರಾಗುವ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆಯನ್ನು ಉಪಮುಖ್ಯಮಂತ್ರಿಯೂ ಆದ ಸಾರಿಗೆ ಸಚಿವ ಲಕ್ಷ್ಮಣ ಸವದಿ ನೀಡಿದ್ದಾರೆ.

ಬಲವಂತವಾಗಿ ಯಾರಾದರೂ ಬಂದ್ ಮಾಡಲು ಪ್ರಯತ್ನಿಸಿದರೆ ಅಂಥವರ ವಿರುದ್ಧ ಪೋಲಿಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.