ನಿರ್ಭಯ ಅತ್ಯಾಚಾರಿ ಅರ್ಜಿ ವಜಾ, ಗಲ್ಲು ಶಿಕ್ಷೆ..!
ದೆಹಲಿ: ಅತ್ಯಾಚಾರ, ಹತ್ಯೆ ಪ್ರಕರಣದ ಅಪರಾಧಿ ಅಕ್ಷಯ್ ಠಾಕೂರ್ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಪ್ರಕರಣದಲ್ಲಿ ನೀಡಿದ್ದ ಗಲ್ಲು ಶಿಕ್ಷೆಯ ತೀರ್ಪನ್ನು ಪ್ರಶ್ನಿಸಿ ಪುನರ್ ಪರಿಶೀಲನಾ ಅರ್ಜಿ ಸಲ್ಲಿಕೆಯಾಗಿತ್ತು.
ಬುಧವಾರ ನ್ಯಾಯಮೂರ್ತಿಗಳಾದ ಎಸ್. ಎ. ಬೋಪಣ್ಣ, ಆರ್. ಭಾನುಮತಿ ಮತ್ತು ಅಶೋಕ್ ಭೂಷಣ್ ಅವರ ತ್ರಿಸದಸ್ಯ ಪೀಠದಲ್ಲಿ ಅಕ್ಷಯ್ ಠಾಕೂರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಯಿತು. ಅಕ್ಷಯ್ ಠಾಕೂರ್ ಪರವಾಗಿ ವಕೀಲ ಎ. ಪಿ. ಸಿಂಗ್ ವಾದ ಮಂಡನೆ ಮಾಡಿದರು.
ಸುಪ್ರೀಂಕೋರ್ಟ್ 23 ವರ್ಷದ ಅಕ್ಷಯ್ ಠಾಕೂರ್ ಗಲ್ಲು ಶಿಕ್ಷೆಯನ್ನು ಪುನರ್ ಪರಿಶೀಲಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಇದರಿಂದಾಗಿ ಅಪರಾಧಿಗೆ ಗಲ್ಲು ಶಿಕ್ಷೆ ಜಾರಿಯಾಗುವುದು ಖಚಿತವಾಗಿದೆ.