ನೈಟ್ ಕರ್ಫ್ಯೂ ಆದೇಶ ಹಿಂಪಡೆದ ರಾಜ್ಯ ಸರ್ಕಾರ..!
ಇಂದು ರಾತ್ರಿಯಿಂದ ಕೊರೋನಾ ಸೊಂಕಿನ ಭೀತಿಯ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ನೈಟ್ ಕರ್ಪ್ಯೂ ಜಾರಿಗೆ ಸಿದ್ಧತೆ ನಡೆಸಿತ್ತು. ಇಂತಹ ನೈಟ್ ಕರ್ಫ್ಯೂಗೆ ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದಕ್ಕೆ ಮಣಿದಿರುವಂತ ರಾಜ್ಯ ಸರ್ಕಾರ, ಇದೀಗ ನೈಟ್ ಕರ್ಪ್ಯೂ ಆದೇಶವನ್ನು ವಾಪಸ್ ಪಡೆದಿದೆ.
ನೈಟ್ ಕರ್ಪ್ಯೂ ಕುರಿತು ಟೀಕೆಗಳು ವ್ಯಕ್ತವಾದ ಬಳಿಕ ರಾಜ್ಯ ಸರ್ಕಾರ ನೈಟ್ ಕರ್ಪ್ಯೂವನ್ನುಜಾರಿಗೂ ಮುನ್ನವೇ ವಾಪಸ್ ಪಡೆದುಕೊಂಡಿದೆ. ಲಂಡನ್ ನಲ್ಲಿ ಕಾಣಿಸಿಕೊಂಡ ರೂಪಾಂತರ ಕೊರೋನಾ ಆತಂಕ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಮಧ್ಯರಾತ್ರಿಯಿಂದ ಜಾರಿಗೊಳಿಸಿದ್ದ ನೈಟ್ ಕರ್ಫ್ಯೂ ವನ್ನು ತೀವ್ರವಿರೋಧದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಿಂಪಡೆದಿದ್ದು , ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.
ವರದಿ: ಬಸವರಾಜ ಕುಂಬಾರ