ರಾಜ್ಯದಲ್ಲಿ ಮೊತ್ತೊಂದು ಗಣಿ ಸ್ಫೋಟ : ಮೃತರ ಕುಟುಂಬಗಳಿಗೆ ಪ್ರಧಾನಿ ಮೋದಿ ಸಂತಾಪ .

ಶಿವಮೊಗ್ಗದಲ್ಲಿ ಆದ  ಗಣಿ ಸ್ಫೋಟದ ಕಹಿ ನೆನಪು ಮಾಸುವ ಮುನ್ನವೇ ಮತ್ತೊಂದು ಜಿಲೆಟಿನ್ ಸ್ಫೋಟ ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿ ಗ್ರಾಮದಲ್ಲಿ ಅವಗಢ ಸಂಭವಿಸಿದೆ . ಈ ದುರಂತದಲ್ಲಿ ಸ್ಥಳದಲ್ಲೇ ೬ ಮಂದಿ ಮೃತಪಟ್ಟಿದ್ದಾರೆ ,ಓರ್ವ ಗಂಭೀರ ಗಾಯಗೊಂಡಿದ್ದಾನೆ . 

ಈ ಘಟನೆ ಕುರಿತಾಗಿ ಪ್ರಧಾನಿ ಮೋದಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ . ಕರ್ನಾಟಕದ  ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದ ಅವಘಡದಲ್ಲಿ ಜೀವಹಾನಿಯಾಗಿರುವದು ನೋವು ತಂದಿದೆ . ಘಟನೆಯಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು . ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ ಎಂದು ಮೋದಿ ತಿಳಿಸಿದ್ದಾರೆ . 

ಈ ಅವಘಡದ  ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ ಮತ್ತು ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ . ಕೆ . ಸುಧಾಕರ್ ,ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು .  ಘಟನೆಯ ಪ್ರಕರಣವನ್ನು ಉನ್ನತ ಮಟ್ಟದ ತನಿಖೆ ನಡಿಸಿ ತಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಸುಧಾಕರ್  ತಿಳಿಸಿದ್ದಾರೆ .

ವರದಿ :ಬಂಡಯ್ಯ ಹಿರೇಮಠ