ಪೇಜಾವರ ಶೀಗಳು ಆಸ್ಪತ್ರೆಗೆ ದಾಖಲು..!

ಉಡುಪಿ: ಇಲ್ಲಿನ ಪೇಜಾವರ ಮಠದ ಮಠಾಧೀಶ ವಿಶ್ವೇಶತೀರ್ಥ ಶ್ರೀಗಳಿಗೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಇಂದು ಮುಂಜಾನೆ ಮಣಿಪಾಲದ ಕೆ.ಎಂಸಿ ಆಸ್ಪತ್ರೆಗೆ ಸೇರಿಸಲಾಗಿದೆ.

ಕೆಲವು ದಿನಗಳಿಂದ ಪೇಜಾವರ ಶ್ರೀಗಳಿಗೆ ಆಗಾಗ ಅನಾರೋಗ್ಯ ಕಾಡುತ್ತಿತ್ತು. ಇಂದು ಬೆಳಗ್ಗೆ 3 ಗಂಟೆಗೆ ಉಸಿರಾಟದ ಸಮಸ್ಯೆ ಹೆಚ್ಚಾದ್ದರಿಂದ ಕೂಡಲೇ ಅವರನ್ನು ಮಣಿಪಾಲಕ್ಕೆ ಕರೆದೊಯ್ಯಲಾಯಿತು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ.

ಧಾರ್ಮಿಕವಾಗಿ ಮಾತ್ರವಲ್ಲದೆ ರಾಜಕೀಯ ವಿಚಾರಗಳಲ್ಲಿ ಸಲಹೆ ಕೊಡುವ ಮೂಲಕವೂ ಸಾಕಷ್ಟು ಪ್ರಸಿದ್ಧರಾಗಿರುವ ಪೇಜಾವರ ಶ್ರೀಗಳ ಆರೋಗ್ಯ ಸುಧಾರಿಸಿಕೊಳ್ಳಲಿದೆ ಎಂದು ವೈದ್ಯರು ಹೇಳಿದ್ದಾರೆ. ಚಳಿಗಾಲವಾದ್ದರಿಂದ ಇದ್ದಕ್ಕಿದ್ದಂತೆ ಉಸಿರಾಟದ ಸಮಸ್ಯೆ ಉಲ್ಬಣಿಸಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.