ರಾಷ್ಟ್ರಪತಿಗಳಿಂದ ನಿರ್ಭಯಾ ಅತ್ಯಚಾರಿ ಮುಕೇಶ್ ಸಿಂಗ್ ಕ್ಷಮಾಪಣ ಅರ್ಜಿ ತಿರಸ್ಕಾರ
ನಿರ್ಭಯಾ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ನಾಲ್ವರು ಅತ್ಯಾಚಾರಿಗಳ ಪೈಕಿ ಮುಕೇಶ್ ಸಿಂಗ್ ಎಂಬಾತ ಕ್ಷಮಾದಾನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಿರಸ್ಕರಿಸಿದ್ದಾರೆ.
ಸುಪ್ರೀಂ ಕೋರ್ಟಿಗೆ ಸಲ್ಲಿಸಿದ ಮರು ಪರಿಶೀಲನಾ ಅರ್ಜಿ ವಜಾ ಆದ ಬಳಿಕ ಮುಕೇಶ್ ಸಿಂಗ್ ಕೆಲ ದಿನಗಳ ಹಿಂದೆ ತನಗೆ ಕ್ಷಮಾದಾನ ನೀಡುವಂತೆ ಮನವಿ ಮಾಡಿಕೊಂಡಿದ್ದ. ಇದರಿಂದ ದೆಹಲಿ ಸರ್ಕಾರ ಜನವರಿ 22ರಂದು ಗಲ್ಲಿಗೇರಿಸುವ ಬಗ್ಗೆ ಗೊಂದಲವಿದೆ ಎಂದಿತ್ತು. ಜೈಲಿನ ನಿಯಮಗಳನ್ನು ಉಲ್ಲೇಖಿಸಿದ್ದ ಸರ್ಕಾರ, ನಾವು ನಿಯಮಗಳಿಗೆ ಅನುಗುಣವಾಗಿಯೇ ಕೆಲಸ ಮಾಡಬೇಕು. ರಾಷ್ಟ್ರಪತಿಗಳಿಗೆ ಸಲ್ಲಿಕೆ ಮಾಡಿರುವ ಕ್ಷಮಾದಾನದ ಅರ್ಜಿ ವಿಲೇವಾರಿಯಾಗುವವರೆಗೂ ಗಲ್ಲು ಶಿಕ್ಷೆ ಸಾಧ್ಯವಿಲ್ಲ ಎಂದು ದೆಹಲಿ ಹೈಕೋರ್ಟಿಗೆ ತಿಳಿಸಿತ್ತು. ಆದರೆ ರಾಷ್ಟಪತಿಗಳ ಈ ಕ್ಷಮಾದಾನ ಅರ್ಜಿಯನಯನ್ನು ತಿರಸ್ಕರಿಸಿದ್ದಾರೆ. ಇದರಿಂದ ಅತ್ಯಾಚಾರಿಗಳಿಗೆ ನೇಣಿನ ಕುಣಿಕೆ ಬೀಳುವುದು ಖಚಿತವಾಗಿದೆ.