ಪೌರತ್ವ ತಿದ್ದುಪಡಿ ಕಾಯ್ದೆಗೆ ರಾಷ್ಟ್ರಪತಿ ಅಂಕಿತ.

ದೆಹಲಿ : ಬಹು ವಿವಾದಿತ ಪೌರತ್ವ ತಿದ್ದುಪಡಿ ಕಾಯ್ದೆಗೆ ರಾಷ್ಟ್ರಪತಿ ರಾಮನಾಥ ಕೊವೀಂದ್ ಅಂಕಿತ ಹಾಕಿದ್ದಾರೆ. ಈ ಮೂಲಕ ಇಂದಿನಿಂದ ಕಾಯ್ದೆಯು ಅಧಿಕೃತವಾಗಿ ಜಾರಿಗೆ ಬಂದಿದೆ.

ಪೌರತ್ವ ತಿದ್ದುಪಡಿ ಮಸೂದೆಯು ಸುಧೀರ್ಘ ಚರ್ಚೆಯ ಬಳಿಕ  ಸೋಮವಾರ ಲೋಕಸಭೆಯಲ್ಲಿ ಹಾಗೂ ಬುಧವಾರ ರಾಜ್ಯಸಭೆಯಲ್ಲಿ  ಅಂಗೀಕಾರ ಪಡೆದುಕೊಂಡು ರಾಷ್ಟ್ರಪತಿ ಅಂಕಿತಕ್ಕಾಗಿ ಕಳುಹಿಸಿ ಕೊಡಲಾಗಿತ್ತು.

ಇದು ಪಾಕಿಸ್ತಾನ, ಅಫಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಬಂದ ಮುಸ್ಲಿಮೇತರ  ವಲಸಿಗರಿಗೆ ಪೌರತ್ವ ನೀಡುವ ಕಾಯ್ದೆಯಾಗಿದೆ.

ಇನ್ನು ಪೌರತ್ವ ತಿದ್ದುಪಡಿ ಮಸೂದೆಗೆ ಎರಡು ಸದನಗಳಲ್ಲಿ ಅಂಗೀಕಾರ ದೊರೆತ ಹಿನ್ನಲೆಯಲ್ಲಿ ಈಶಾನ್ಯ ಭಾರತದಲ್ಲಿ ತೀವ್ರ ಪ್ರತಿಭಟನೆ ನಡೆಯುತ್ತಿದೆ.