ಪಾಕ್ ಪರ ಘೋಷಣೆ: ಅಮೂಲ್ಯ ಲಯೋನಾಗೆ 14 ದಿನ ನ್ಯಾಯಾಂಗ ಬಂಧನ
ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಆಯೋಜಿಸಿದ್ದ ಪ್ರತಿಭಟನೆ ವೇಳೆ 'ಪಾಕಿಸ್ತಾನ ಜಿಂದಾಬಾದ್' ಎಂದು ಘೋಷಣೆ ಕೂಗಿದ ಅಮೂಲ್ಯ ಲಿಯೋನಾಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಗುರುವಾರ ಪ್ರತಿಭಟನೆ ಆಯೋಜಿಸಿತ್ತು. ಈ ಪ್ರತಿಭಟನಾ ಸಭೆಯಲ್ಲಿ ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಪಾಲ್ಗೊಂಡಿದ್ದರು. ಪ್ರತಿಭಟನೆ ಆರಂಭವಾಗುತ್ತಿದ್ದಂತೆ ವೇದಿಕೆ ಮೇಲೆ ಬಂದ ಅಮೂಲ್ಯ ಎಂಬ ಯುವತಿ ಇದ್ದಕ್ಕಿದ್ದ ಹಾಗೆ ‘ಪಾಕಿಸ್ತಾನ ಜಿಂದಾಬಾದ್’ ಎಂದು ಎರಡು ಬಾರಿ ಘೋಷಣೆ ಕೂಗಿದ್ದಳು. ತಕ್ಷಣ ಆಕೆಯನ್ನು ವೇದಿಕೆಯಿಂದ ಕೆಳಗಿಳಿಸಿದ ಆಯೋಜಕರು ಪೊಲೀಸರ ವಶಕ್ಕೆ ಒಪ್ಪಿಸಿದ್ದರು. ಆಕೆಯನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದ ಪೊಲೀಸರು ಆಕೆಯ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿದ್ದರು.
ಪ್ರಕರಣ ದಾಖಲಾದ ನಂತರ ರಾತ್ರೋರಾತ್ರಿ ಕೋರಮಂಗಲದ ರಾಷ್ಟ್ರೀಯ ಕ್ರೀಡಾ ಗ್ರಾಮದಲ್ಲಿರುವ 5 ನೇ ಎಸಿಎಂಎಂ ನ್ಯಾಯಾಧೀಶೆ ಮುಂದೆ ಅಮೂಲ್ಯಳನ್ನು ಹಾಜರುಪಡಿಸಲಾಯಿತು. ನ್ಯಾಯಾಧೀಶೆ ಶಿರಿನ್ ಜೆ ಅನ್ಸಾರಿ, ಅಮೂಲ್ಯಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದರು.