ರಾಹುಲ್ ಗಾಂಧಿಯಿಂದ ವೀರ್ ಸಾವರ್ಕರ್ ಗೆ ಅವಮಾನ...
ಮುಂಬೈ : ದೆಹಲಿಯಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ
"ಭಾರತ್ ಬಚಾವೋ" ಆಂದೋಲನದಲ್ಲಿ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆ ಈಗ ದೇಶಾದ್ಯಂತ ವಿವಾದದ ಸ್ವರೂಪ
ಪಡೆದುಕೊಂಡಿದೆ.
" ಕ್ಷಮೆ ಕೇಳಲು ನಾನು ರಾಹುಲ್ ಸಾವರ್ಕರ್ ಅಲ್ಲ ,ರಾಹುಲ್ ಗಾಂಧಿ. ಸತ್ಯ ಹೇಳಿದ್ದಕ್ಕೆ ಜೀವ ಬಿಡುತ್ತೇನೆಯೇ ಹೊರತು ಕ್ಷಮೆ ಕೇಳುವುದಿಲ್ಲ" ಎಂದು ನಿನ್ನೆ ನಡೆದ ರ್ಯಾಲಿಯಲ್ಲಿ ರಾಹುಲ್ ಗಾಂಧಿ ಹೇಳಿದ್ದಾರೆ.
ಇನ್ನು ರಾಹುಲ್ ಗಾಂಧಿಯ ಸಾವರ್ಕರ್ ಕುರಿತ ಹೇಳಿಕೆಗೆ ಮುಂಬೈ ನಲ್ಲಿ ಪ್ರತಿಕ್ರಯಿಸಿರುವ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ರಾಹುಲ್ ಗಾಂಧಿ ಹೇಳಿಕೆ ವೀರ್ ಸಾವರ್ಕರ್ ಗೆ ಮಾಡಿದ ಅವಮಾನ. ದೇಶಕ್ಕಾಗಿ ತಮ್ಮ ಜೀವನವನ್ನೇ ಮಡಿಪಿಟ್ಟೀದ್ದ ಸಾವರ್ಕರ್ ಕುರಿತು ಬೇಜವಾಬ್ದಾರಿ ಹೇಳಿಕೆ ನೀಡಿರುವ ರಾಹುಲ್ ಗಾಂಧಿ ದೇಶದ ಕ್ಷಮೆ ಯಾಚಿಸಬೇಕೆಂದು ಟ್ವಿಟರ್ ನಲ್ಲಿ ಆಗ್ರಹಿಸಿದ್ದಾರೆ.
ಈ ಸಮಾವೇಶಕ್ಕೂ ಮುಂಚೆ ರಾಹುಲ್ ಗಾಂಧಿ ದೇಶದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ, ಭಾರತ ರೇಪ್ ರಾಜಧಾನಿಯಾಗುತ್ತಿದೆ. ಇದು ಮೇಕ್ ಇನ್ ಇಂಡಿಯಾ ಅಲ್ಲಾ ರೇಪ್ ಇನ್ ಇಂಡಿಯಾ ಆಗಿದೆ ಎಂದು ಹೇಳಿಕೆ ನೀಡಿದ್ದರು.
ಈ ಹೇಳಿಕೆಗೆ ಸ್ಮೃತಿ ಇರಾನಿ ಸೇರಿದಂತೆ ಹಲವು ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿ ರಾಹುಲ್
ಕ್ಷಮೆಯಾಚನೆಗೆ ಒತ್ತಾಯಿಸಿದ್ದರು.