ಡ್ರೈವರ್ ಆದ ಶಾಸಕ ರೇಣುಕಾಚಾರ್ಯ..! ...............
ಹೊನ್ನಾಳಿ ಶಾಸಕ ರೇಣುಕಾಚಾರ್ಯ ಡ್ರೈವರ್ ಆಗಿದ್ದರು. ಹೌದು ಜ-7 ಭಾನುವಾರ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿಗಳು ಆದ ಎಂಪಿ ರೇಣುಕಾಚಾರ್ಯ ಗೊಲ್ಲರಹಳ್ಳಿ, ಬೆನಕಹಳ್ಳಿ, ಉಜ್ಜನಿಪುರ, ರಾಂಪುರ, ಸಾಸ್ವೇಹಳ್ಳಿ ಗ್ರಾಮಗಳ ಮಾರ್ಗವಾಗಿ ಹೊಸದಾಗಿ ಕೆಎಸ್ಆರ್ ಟಿಸಿ ಬಸ್ ಚಾಲನೆಯ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈ ವೇಳೆ ತಾವೇ ಚಾಲಕನ ಯೂನಿಫಾರಂ ಹಾಕಿಕೊಂಡು ಗ್ರಾಮಗಳಿಗೆ ಬಸ್ ಚಲಾಯಿಸಿ ಎಲ್ಲರನ್ನು ಚಕಿತಗೊಳಿಸಿದರು.
ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಹೊಸ ಮಾರ್ಗದಲ್ಲಿ ಬಸ್ ಸಂಚಾರ ಆರಂಭದ ವೇಳೆ ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಕೆಎಸ್ ಆರ್‌ಟಿಸಿ ಬಸ್ ಚಾಲನೆ ಮಾಡಿ ಸುದ್ದಿಯಾಗಿದ್ದಾರೆ. ಆದರೆ ಈಗ ಬಸ್ ಚಾಲನೆ ಮಾಡಿದ್ದಕ್ಕೆ ನೋಟೀಸ್ ಬಂದಿದೆ. ಶಿವಮೊಗ್ಗದ ಕೆಎಸ್ಆರ್ ಟಿಸಿ ಡಿಸಿಟಿ ಆರ್ ನವೀನ್ ಕುಮಾರ್ ಘಟನೆ ಬಗ್ಗೆ ವಿವರಣೆ ಕೇಳಿ ಹೊನ್ನಾಳಿ ಘಟಕ ವ್ಯವಸ್ಥಾಪಕ ಮಹೇಶ್ವರಪ್ಪರಿಗೆ ನೋಟೀಸ್ ನೀಡಿದ್ದಾರೆ.
ರೇಣುಕಾಚಾರ್ಯ ಬಸ್ ಚಲಾಯಿಸಿದ್ದು ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಅಲ್ಲದೆ ಶಾಸಕ ಎಂ.ಪಿ.ರೇಣುಕಾಚಾರ್ಯ ಚಾಲಕನ ಸಮವಸ್ತ್ರ ಧರಿಸಿ ಸುಮಾರು 60 ಕಿಮೀನಷ್ಟು ದೂರ ಬಸ್ ಚಲಾಯಿಸಿ ಜನರನ್ನ ಬೆರಗುಗೊಳಿಸಿದ್ದಾರೆ. ನಿಯಮದ ಪ್ರಕಾರ ಕೆಎಸ್ಆರ್ ಟಿಸಿ ಬಸ್ ಗಳನ್ನು ಕೇವಲ ನಿಗಮದ ಚಾಲಕರು ಹಾಗೂ ಇಲಾಖೆಯ ಪರವಾನಿಗೆ ಪಡೆದವರು ಚಲಾಯಿಸಬೇಕು ಅದಲ್ಲದೆ ಶಾಸಕರು ಪ್ರಯಾಣಿಕರನ್ನು ಕೂರಿಸಿಕೊಂಡು ಬಸ್ ಚಲಾಯಿಸಿರುವುದಕ್ಕೆ ವಿವರಣೆ ನೀಡುವಂತೆ ಕೆಎಸ್ ಆರ್‌ಟಿಸಿ ಶಿವಮೊಗ್ಗ ವಿಭಾಗೀಯ ನಿಯಂತ್ರಣಾಧಿಕಾರಿ ಸ್ವಪ್ರೇರಣೆಯಿಂದ ಹೊನ್ನಾಳಿ ಘಟಕ ವ್ಯವಸ್ಥಾಪಕ ಮಹೇಶ್ವರಪ್ಪ ಅವರಿಗೆ ನೋಟೀಸ್ ನೀಡಿದ್ದಾರೆ.
ಇದೀಗ ಈ ಪ್ರಕರಣ ಯಾವ ತಿರುವು ಪಡೆದುಕೊಳ್ಳಲಿದೆ ಎನ್ನುವುದ ಕಾದುನೋಡಬೇಕು.