1.jpeg)
ಮಧ್ಯಪ್ರದೇಶದಲ್ಲಿ ಶುರುವಾಯ್ತು ರೆಸಾರ್ಟ್ ಪಾಲಿಟಿಕ್ಸ್...
ಭೂಪಾಲ್ : ಮಧ್ಯಪ್ರದೇಶದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳ ಮಧ್ಯೆಯೇ ರೆಸಾರ್ಟ್ ಪಾಲಿಟಿಕ್ಸ್ ಆರಂಭವಾಗಿದೆ. ಬೆಂಗಳೂರಿನ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿರುವ ಕಾಂಗ್ರೆಸ್ 22 ಶಾಸಕರು ರಾಜೀನಾಮೆ ನೀಡಿದ ಬೆನ್ನಲ್ಲೆ , ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ತಮ್ಮ ಪಕ್ಷದ ಶಾಸಕರನ್ನು ರೆಸಾರ್ಟ್ ಗೆ ಶಿಫ್ಟ್ ಮಾಡಿವೆ.
ಕಾಂಗ್ರೆಸ್ ತನ್ನ ಉಳಿದ 92 ಶಾಸಕರನ್ನು ರಹಸ್ಯ ಸ್ಥಳಕ್ಕೆ ಶಿಫ್ಟ್ ಮಾಡಿದ್ದು, ರಿವರ್ಸ್ ಆಪರೇಷನ್ ಭಯದಿಂದ ಬಿಜೆಪಿ ಸಹ ತನ್ನ 107 ಶಾಸಕರನ್ನು ದೆಹಲಿ ಸಮೀಪದ ರೆಸಾರ್ಟ್ ಗೆ ಶಿಫ್ಟ್ ಮಾಡುತ್ತಿದೆ.
ಈ ಬೆಳವಣಿಗೆಗಳ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲನಾಥ್ ರಾಜ್ಯದಲ್ಲಿ ಸೃಷ್ಟಿಯಾಗಿರುವ ಅರಾಜಕತೆ ತಾತ್ಕಾಲಿಕ. ನಾನು ಬಹುಮತ ಸಾಬೀತು ಮಾಡೇ ಮಾಡ್ತೀನಿ ಅಂದಿದ್ದಾರೆ.