1.jpg)
ಇನ್ಫೋಸಿಸ್ ನಾರಾಯಣ ಮೂರ್ತಿ ಅವರ ಅಳಿಯ ರಿಷಿ ಸುನಕ್ ಬ್ರಿಟನ್ ನೂತನ ಹಣಕಾಸು ಸಚಿವರಾಗಿ ಆಯ್ಕೆ
ಇನ್ಫೋಸಿಸ್ ನಾರಾಯಣಮೂರ್ತಿ ಅವರ ಅಳಿಯ ರಿಷಿ ಸುನಕ್ ಅವರನ್ನು ಬ್ರಿಟನ್ ನೂತನ ಹಣಕಾಸು ಸಚಿವ ರಾಗಿ ಗುರುವಾರ ನೇಮಕ ಮಾಡಿದ್ದಾರೆ.
ಅಚ್ಚರಿಯ ಬೆಳವಣಿಗೆಯಲ್ಲಿ ಯೆಂದರೆ ಹಾಲಿ ಹಣಕಾಸು ಸಚಿವರಾಗಿದ್ದ ಪಾಕಿಸ್ತಾನ ಮೂಲದ ಸಜಿದ್ ಜಾವಿದ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಆ ಸ್ಥಾನವನು ನಮ್ಮ ಕನ್ನಡದ ಹೆಮ್ಮೆಯ ಅಳಿಯ ರಿಷಿ ಸುನಕ್ ತುಂಬಲಿದ್ದಾರೆ.
2015ರಲ್ಲಿ ಬ್ರಿಟನ್ ಸಂಸತ್ಗೆ ಆಯ್ಕೆಯಾಗಿದ್ದರು. ಈ ಹಿಂದೆ ಅವರು ಖಜಾನೆ ಕಾರ್ಯದರ್ಶಿ ಯಾಗಿದ್ದರು .ಈ ಖಾತೆ ಹಣಕಾಸು ಸಚಿವರ ನಂತರದ ಪ್ರಮುಖ ಸ್ಥಾನವಾಗಿದೆ.
2015ರಲ್ಲಿ ಬ್ರಿಟನ್ ಸಂಸತ್‌ಗೆ ಆಯ್ಕೆಯಾಗಿದ್ದ ರಿಷಿ ಈ ಹಿಂದೆ ಖಜಾನೆ ಇಲಾಖೆ ಮುಖ್ಯ ಕಾರ್ಯದರ್ಶಿಯಾಗಿದ್ದರು. ಇದು ಹಣಕಾಸು ಸಚಿವರ ನಂತರದ ಪ್ರಮುಖ ಸ್ಥಾನವಾಗಿದೆ.
ಅವರು ಲಂಡನ್ ಮ್ಯಾಂಚೆಸ್ಟರ್ ಕಾಲೇಜಿನಲ್ಲಿ ಅಧ್ಯಯನ ನಡೆಸಿದ್ದಾರೆ.
ಆಕ್ಸ್‌ಫರ್ಡ್ ವಿವಿಯಲ್ಲಿ ರಾಜಕೀಯ, ಫಿಲಾಸಫಿ ಮತ್ತು ಅರ್ಥಶಾಸ್ತ್ರದಲ್ಲಿ ಉನ್ನತ ಶಿಕ್ಷಣ ಪಡೆದುಕೊಂಡಿದ್ದಾರೆ.