ಶಿಕಾರಿಪುರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ವಿವಿಧ 16 ಪ್ರಕರಣಗಳನ್ನು ಬೇಧಿಸಿ 774 ಗ್ರಾಂ ಚಿನ್ನ, 4 ಕೆ.ಜಿ ಬೆಳ್ಳಿ ಸೇರಿದಂತೆ ಒಟ್ಟು 27,28,721 ರೂ. ಮೌಲ್ಯದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಶಿಕಾರಿಪುರ ಉಪ ವಿಭಾಗ ವ್ಯಾಪ್ತಿಯಲ್ಲಿ ದಾಖಲಾದ ಮನೆಗಳ್ಳತನ ಪ್ರಕರಣಗಳಲ್ಲಿ ಕಳುವಾದ ಮಾಲು ಸಮೇತ ಐದು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳು ಚಿತ್ರದುರ್ಗ ಹಾಗೂ ಬೆಂಗಳೂರು ಮೂಲದವರಾಗಿದ್ದು, ಬಂಧಿತರನ್ನು ಮಂಜುನಾಥ್, ರಂಗನಾಥ, ವೆಂಕಟೇಶ, ಶಶಿಕುಮಾರ, ರಾಜೇಶ, ಗವಿರಾಜ, ರಾಜಪ್ಪ ಹಾಗೂ ಲೋಕೇಶ್ ಎಂದು ಗುರುತಿಸಲಾಗಿದೆ.