ಪತ್ನಿಗೆ ಅಶ್ಲೀಲ ವಿಡಿಯೋ ತೋರಿಸಿ ಪತಿ ಕಿರುಕುಳ
ಬೆಂಗಳೂರು: ಅಶ್ಲೀಲ ವಿಡಿಯೋ ತೋರಿಸಿ ಪತಿ ಹಿಂಸೆ ನೀಡುತ್ತಿರುವುದಾಗಿ ಆರೋಪಿಸಿ ಮಹಿಳಾ ಟೆಕ್ಕಿಯೊಬ್ಬರು ಬಸವನಗುಡಿ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.
ಬೆಂಗಳೂರು ಚಾಮರಾಜಪೇಟೆಯ 30 ವರ್ಷದ ಸಾಫ್ಟ್ ವೇರ್ ಇಂಜಿನಿಯರ್ ದೂರು ನೀಡಿದ್ದು ಬಸವನಗುಡಿ ಮಹಿಳಾ ಠಾಣೆ ಪೊಲೀಸರು ಹರ್ಷವರ್ಧನ್ ಎಂಬುವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
2018 ರಲ್ಲಿ ಮದುವೆಯಾಗಿದ್ದು 7.50 ಲಕ್ಷ ರೂಪಾಯಿ ವರದಕ್ಷಿಣೆ ನೀಡಲಾಗಿತ್ತು. ಮದುವೆಯಾದ ನಂತರ ಪತ್ನಿಯಿಂದ ಚಿನ್ನಾಭರಣ ಕಸಿದುಕೊಂಡ ಪತಿ, ತವರಿಂದ ಹೆಚ್ಚಿನ ಹಣ ತರುವಂತೆ ಒತ್ತಡ ಹೇರುತ್ತಿದ್ದರು. ಅಲ್ಲದೆ, ಅಶ್ಲೀಲ ವೀಡಿಯೋ ತೋರಿಸಿ ತಾನು ಹೇಳಿದಂತೆ ಕೇಳಬೇಕೆಂದು ಬೆದರಿಕೆ ಹಾಕುತ್ತಿದ್ದರು. ತಾನು ದುಡಿದ ವೇತನವನ್ನು ಸಹ ಕಸಿದುಕೊಳ್ಳುತ್ತಿದ್ದರೆಂದು ಆರೋಪಿಸಲಾಗಿದೆ. ಮಹಿಳಾ ಟೆಕ್ಕಿ ನೀಡಿದ ದೂರು ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.