ಹುಲಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್

 

ಬೆಂಗಳೂರು: ಕಳೆದ ನಾಲ್ಕು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದ  ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಬೆಳಗ್ಗೆ ಡಿಸ್ಚಾರ್ಜ್ ಆಗಿದ್ದಾರೆ. "ಆಂಜಿಯೋಪ್ಲ್ಯಾಸ್ಟಿ" ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಅವರು, ಸದ್ಯ ಚೇತರಿಸಿಕೊಂಡಿದ್ದಾರೆ.

 

ಖಾಸಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆದ ಸಿದ್ದರಾಮಯ್ಯ  ನೇರವಾಗಿ ಕಾವೇರಿ ನಿವಾಸಕ್ಕೆ ತೆರಳಿದ್ದಾರೆ. ಇನ್ನೂ 10 ರಿಂದ 15 ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ಮಾಜಿ ಸಿಎಂಗೆ ವೈದ್ಯರು ಸೂಚನೆ ನೀಡಿದ್ದಾರೆ.

 

ಸಿದ್ದುಗೆ ಅಭಿಮಾನಿಗಳ ಜೈಕಾರ..!

ಇಂದು ಸಿದ್ದರಾಮಯ್ಯ ಡಿಸ್ಚಾರ್ಜ್​ ಆಗಲಿದ್ದಾರೆ ಎಂಬ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಅಭಿಮಾನಿಗಳು ಆಸ್ಪತ್ರೆ ಮುಂಭಾಗಕ್ಕೆ ಸೇರಿದ್ದು,ಸಿದ್ದರಾಮಯ್ಯ ಹೊರಗಡೆ ಬರುತ್ತಿದ್ದಂತೆ ಜೈಕಾರ ಹಾಕಿದ್ರು. ಹುಲಿಯಾ, ಹುಲಿಯಾ.. ಹೌದು ಹುಲಿಯಾ ಎಂದು ಘೋಷಣೆ ಕೂಡ ಕೂಗಿದ್ರು.