ತೇಜಸ್ವಿ, ಸೂಲಿಬೆಲೆ ಹತ್ಯೆಗೆ ನಡೆದಿತ್ತು ಬಿಗ್‌ ಪ್ಲಾನ್.....!‌ಹೊರಬಿತ್ತು ಸ್ಪೋಟಕ ಮಾಹಿತಿ

ಬೆಂಗಳೂರು: ಸಿಎಎಯಿಂದ ದೇಶದ ಅಲ್ಪಸಂಖ್ಯಾತರಿಗೆ ಯಾವುದೆ ತೊಂದರೆ ಆಗದು ಎನ್ನುವ ಬಗ್ಗೆ ಜಾಗೃತಿ ಮೂಡಿಸಲು ಡಿ.22ರಂದು ಬೆಂಗಳೂರಿನಲ್ಲಿ ಕಾರ್ಯಕ್ರಮ ಹಮ್ಮಿಕೋಳ್ಳಲಾಗಿತ್ತು. ಈ ವೇಳೆ ಸಂಸದ ತೇಜಸ್ವಿ ಸೂರ್ಯ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಕೊಲೆಗೆ ಸ್ಕೆಚ್ ನಡೆದಿತ್ತು ಎನ್ನುವ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ.

ಬಹಿರಂಗವಾಗಿದ್ದು ಹೇಗೆ?
ದೇಶಾದ್ಯಂತ ಪೌರತ್ವ ಕಾಯ್ದೆ ಜಾರಿ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದು, ಸಿಎಎ ಪರ ಜನಜಾಗೃತಿ ಹೊರಟಿದ್ದ ವರುಣ್ ಮೇಲೆ ಎಸ್‍ಡಿಪಿಐ ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಹಿಂಬದಿಯಿಂದ ಎರಡು ಬೈಕ್ ನಲ್ಲಿ ಬಂದಿದ್ದ ಆರೋಪಿಗಳು ರಾಡ್ ಹಾಗೂ ಲಾಂಗ್ ಗಳಿಂದ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದರು. ಪ್ರಕರಣ ಸಂಬಂಧ ಕಲಾಸಿಪಾಳ್ಯ ಪೊಲೀಸರು ಆರು ಜನ ಆರೋಪಿಗಳನ್ನ ಬಂಧಿಸಿದ್ದರು. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ಆಧರಿಸಿ ತನಿಖೆ ಕೈಗೊಂಡ ಪೊಲೀಸರಿಗೆ ಸ್ಫೋಟಕ ಸತ್ಯ ಬೆಳಕಿಗೆ ಬಂದಿದೆ.

ಇರ್ಫಾನ್, ಸೈಯದ್ ಅಕ್ಬರ್, ಸೈಯದ್ ಸಿದ್ಧಿಕ್, ಅಕ್ಬರ್ ಪಾಷಾ, ಸನಾ ಹಾಗೂ ಸಾಧಿಕ್ ಉಲ್ ಅಮೀನ್ ಬಂಧಿತ ಎಸ್‍ಡಿ ಪಿಐ ಕಾರ್ಯಕರ್ತರು. ಆರೋಪಿಗಳ ವಿಚಾರಣೆಯ ವೇಳೆ ವರುಣ್ ಮೇಲೆ ಹಲ್ಲೆಗೆ ವೈಯಕ್ತಿಕ ಕಾರಣವೇ ಇಲ್ಲ. ಆರೋಪಿಗಳಿಗೂ ವರುಣ್ ಗೂ ಸಂಬಂಧವೇ ಇಲ್ಲ. ಸಿಎಎ ಪರವಾಗಿ ಜನಜಾಗೃತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರಿಂದ ಆತನ ಹತ್ಯೆಗೆ ಮುಂದಾಗಿರುವುದಾಗಿ ಆರೋಪಿಗಳು ತಿಳಿಸಿದ್ದಾರೆ.
 ಸಿಎಎ ಪರ ಸಭೆ ನಡೆದ ಸ್ಥಳದಲ್ಲಿ ಆರೋಪಿಗಳು ಏಳೆಂಟು ಕಲ್ಲುಗಳನ್ನು ಎಸೆದಿದ್ದರು. ಕಲ್ಲು ಬಿದ್ದಾಗ ಜನ ಚದುರುತ್ತಾರೆ ಆಗ ಒಬ್ಬಂಟಿಯಾಗುವ ಮುಖಂಡನನ್ನ ಕೊಲೆ ಮಾಡುವ ಪ್ಲಾನ್ ಮಾಡಿದ್ದರು. ಆರೋಪಿಗಳು ಎಸೆದ ಕಲ್ಲು ಬೇರೆ ಬೇರೆ ಕಡೆ ಬಿದ್ದಿದ್ದವು. ನಂತರ ಕೇಸರಿ ಬಟ್ಟೆ ಧರಿಸಿದ್ದ ಆರೋಪಿಗಳು ವರುಣ್ ನನ್ನು ಹಿಂಬಾಲಿಸಿದ್ದರು. ತಮ್ಮ ಇರುವಿಕೆ ಮರೆಮಾಚಲು ಮೊಬೈಲ್ ಆನ್ ಮಾಡಿ ಆರೋಪಿಗಳು ಮನೆಯಲ್ಲಿಯೇ ಬಿಟ್ಟು ಬಂದಿದ್ದರು. ಮುಖ ಚಹರೆ ಮರೆ ಮಾಚಲು ಹೆಲ್ಮೆಟ್ ಧರಿಸಿದ್ದರು. ಕೃತ್ಯಕ್ಕೆ ಬಳಸಿದ್ದ ವಾಹನಗಳ ನಂಬರ್ ಗಳನ್ನ ಕಪ್ಪು ಮಸಿ ಹಚ್ಚಿದ್ದರು. ಆರೋಪಿಗಳು ಎಸ್‍ಡಿಪಿಐ ನಿಂದ ತಿಂಗಳಿಗೆ ಹತ್ತು ಸಾವಿರ ಹಣ ಪಡೆಯುತ್ತಿದ್ದರು. ಅಲ್ಲದೆ ಸಮಾಜದಲ್ಲಿ ಸ್ವಾಸ್ಥ್ಯ ಹಾಳುಮಾಡುವಂತೆ ಸೂಚನೆ ಪಡೆದಿದ್ದರು ಎನ್ನುವ ವಿಚಾರ ತನಿಖೆಯ ವೇಳೆ ಬೆಳಕಿಗೆ ಬಂದಿದೆ.