ದಕ್ಷಿಣ ಆಫ್ರಿಕಾದ ಅನುಭವಿ ವೇಗದ ಬೌಲರ್ ವೆರ್ನಾನ್ ಫಿಲಾಂಡರ್ ವಿದಾಯ..
ದಕ್ಷಿಣ ಆಫ್ರಿಕಾದ ಅನುಭವಿ ವೇಗದ ಬೌಲರ್ ವೆರ್ನಾನ್ ಫಿಲಾಂಡರ್ ಅವರು ಇಂಗ್ಲೆಂಡ್ ವಿರುದ್ಧದ ಸರಣಿಯ ನಂತರ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗುವುದಾಗಿ ಘೋಷಿಸಿದ್ದಾರೆ. ಡಿಸೆಂಬರ್ 26 ರಿಂದ ಇಂಗ್ಲೆಂಡ್ ವಿರುದ್ಧ ನಾಲ್ಕು ಟೆಸ್ಟ್ ಪಂದ್ಯಗಳನ್ನು ಆಡಲಿದೆ. 2011 ರಲ್ಲಿ ಪಾದಾರ್ಪಣೆ ಮಾಡಿದಾಗಿನಿಂದ, ಫಿಲಾಂಡರ್ ಅಂತರರಾಷ್ಟ್ರೀಯ ಕ್ರಿಕೆಟ್ ನ ಶ್ರೇಷ್ಠ ವೇಗದ ಬೌಲರ್‌ಗಳಲ್ಲಿ ಒಬ್ಬರಾಗಿದ್ದಾರೆ. ವೆರ್ನಾನ್ ಫಿಲಾಂಡರ್ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಚೊಚ್ಚಲ ಪಂದ್ಯವನ್ನು ಆಡಿದರು.
ಇಂಗ್ಲೆಂಡ್ ವಿರುದ್ಧದ 4 ಪಂದ್ಯಗಳ ಟೆಸ್ಟ್ ಸರಣಿ ಡಿ. 26 ರಿಂದ ಜ. 24 ರವರೆಗೆ ನಡೆಯಲಿದೆ. 34 ವರ್ಷ ವಯಸ್ಸಿನ ಫಿಲಾಂಡರ್, 60 ಟೆಸ್ಟ್, 30 ಏಕದಿನ ಮತ್ತು 7 ಟಿ20 ಪಂದ್ಯಗಳಲ್ಲಿ ಆಡಿದ್ದಾರೆ. ಟೆಸ್ಟ್‌ನಲ್ಲಿ 22.16ರ ಸರಾಸರಿಯಲ್ಲಿ ಫಿಲಾಂಡರ್ 261 ವಿಕೆಟ್ ಪಡೆದಿದ್ದಾರೆ. 13 ಬಾರಿ 5 ವಿಕೆಟ್ ಸಾಧನೆ ಮಾಡಿದ್ದಾರೆ. ಇನ್ನು ಬ್ಯಾಟಿಂಗ್’ನಲ್ಲಿ 1619 ರನ್ ಬಾರಿಸಿದ್ದಾರೆ. 2012ರಲ್ಲಿ ಫಿಲಾಂಡರ್, 7 ಟೆಸ್ಟ್ ಪಂದ್ಯಗಳಲ್ಲಿ 51 ವಿಕೆಟ್ ಕಿತ್ತಿದ್ದರು.ತಮ್ಮ ನಿವೃತ್ತಿ ಸುದ್ದಿಯನ್ನು ಬಹಿರಂಗಪಡಿಸುವಾಗ, ಫಿಲಾಂಡರ್ ಅವರು ವಿದಾಯಕ್ಕೆ ಇದು ಸರಿಯಾದ ಸಮಯ ಎಂದು ಭಾವಿಸಿದ್ದೇನೆ. ಯುವಕರಿಗೆ ಅವಕಾಶ ನೀಡುತ್ತಾರೆ ಎಂದು ಹೇಳಿದರು. ಅವರು ತಮ್ಮ ತಂದೆ, ಕ್ರಿಕೆಟ್ ದಕ್ಷಿಣ ಆಫ್ರಿಕಾ ಮತ್ತು ಅವರ ಆಟದೊಂದಿಗೆ ಸಂಬಂಧ ಹೊಂದಿದ್ದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದರು.