ರೈತರಿಗೆ ರಾಜ್ಯ ಸರ್ಕಾರ200ರೂ ಬೆಂಬಲ ಬೆಲೆ ಘೋಷಿಸಿದ್ದಾರೆ.
ರಾಜ್ಯ ಸರ್ಕಾರ ರೈತರಿಗೆ ಭರ್ಜರಿ ಕೊಡುಗೆ ನೀಡಲು ಮುಂದಾಗಿದೆ.
ಭತಕ್ಕೆ ಬೆಂಬಲ ಬೆಲೆ ನೀಡುವದಾಗಿ ಘೋಷಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರದಿಂದ ರೈತರಿಗೆ ಮತ್ತೊಂದು ಕೊಡುಗೆ ನೀಡಲಾಗಿದೆ.
ರಾಜ್ಯ ಸರ್ಕಾರದಿಂದ ಭತ್ತಕ್ಕೆ 200 ರೂಪಾಯಿ ಬೆಂಬಲ ಬೆಲೆ ನೀಡಲು ತೀರ್ಮಾನಿಸಲಾಗಿದೆ. ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ.
ರಾಯಚೂರು, ಬಳ್ಳಾರಿ, ಕೊಪ್ಪಳ ಜಿಲ್ಲೆಯ ಜನಪ್ರತಿನಿಧಿಗಳು, ರೈತರ ನಿಯೋಗದ ಸಭೆಯಲ್ಲಿ ಸರ್ಕಾರದಿಂದ ಬೆಂಬಲ ಬೆಲೆ ನೀಡುವ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ