ಪೌರತ್ವ ಕಾಯ್ದೆ ಜಾರಿಗೊಳಿಸಲ್ಲ ಎಂದು ಹೇಳಲು ರಾಜ್ಯಗಳಿಗೆ ಅಧಿಕಾರವಿಲ್ಲ : ಶಶಿ ತರೂರ್.
ಕೊಲ್ಕತ್ತಾ : ಸಿಎಎ ವಿರುದ್ಧ ರಾಜ್ಯ ಸರ್ಕಾರಗಳು ವಿಧಾನಸಭೆಯಲ್ಲಿ ಕೈಗೊಂಡ ನಿರ್ಣಯಗಳು ಕೇವಲ ರಾಜಕೀಯ ನಡೆಯಾಗಿದ್ದು , ಪೌರತ್ವದ ವಿಚಾರದಲ್ಲಿ ರಾಜ್ಯಗಳಿಗೆ ಯಾವುದೇ ಅಧಿಕಾರವಿಲ್ಲ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಹೇಳಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಡಿದ ಶಶಿ ತರೂರ್, ರಾಷ್ಟೀಯ ಪೌರತ್ವ ನೋಂದಣಿ ಹಾಗೂ ರಾಷ್ಟೀಯ ಜನಸಂಖ್ಯಾ ನೋಂದಣಿ ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರಗಳ ಅಧಿಕಾರಿಗಳು ಸಹ ಪಾಲ್ಗೊಳ್ಳಬೆಕಾಗುತ್ತದೆ ಎಂದರು.
ಧರ್ಮದ ಆಧಾರದಲ್ಲಿ ಕಾನೂನುಗಳನ್ನು ರಚಿಸುವ ಮೂಲಕ ಸರ್ಕಾರ ಸಂವೀಧಾನದ ನಿಯಮಗಳನ್ನು ಉಲ್ಲಂಘಿಸಿದೆ ಎಂದು ತಿಳಿಸಿದರು. ಸಿಎಎ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಗೆ ಸುಪ್ರೀಮ್ ಕೋರ್ಟ್ ಪಂಚ ಸದಸ್ಯರ ಸಾಂವಿಧಾನಿಕ ಪೀಠ ರಚಿಸಿರುವುದು ಸ್ವಾಗತಾರ್ಹ ಎಂದರು.
ಇನ್ನು ಸಿಎಎ ಕಾಯ್ದೆಯನ್ನು ವಿರೋಧಿಸುವ ನಿರ್ಣಯವನ್ನು ಇತ್ತೀಚಿಗೆ ಕೇರಳ ಹಾಗೂ ಪಂಜಾಬ್ ಸರ್ಕಾರಗಳು ವಿಧಾನಸಭೆಯಲ್ಲಿ ಅಂಗೀಕರಿಸಿದ್ದವು. ಪಶ್ಚಿಮ ಬಂಗಾಳ ಸರ್ಕಾರ ಸಹ ಪೌರತ್ವ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಕೈಗೊಳ್ಳುವುದಾಗಿ ಹೇಳಿದೆ.