ದೆಹಲಿಯಲ್ಲಿ ಭುಗಿಲೆಧ್ಧ ಹಿಂಸಾಚಾರ......
ದೆಹಲಿ : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವಿನ ಘರ್ಷಣೆಯಿಂದಾಗಿ ದೆಹಲಿ ಅಕ್ಷರಶಃ ಸ್ತಬ್ಧವಾಗಿದೆ.
ನಿನ್ನೆ ಪೌರತ್ವ ತಿಡ್ದುಪಡಿ ಕಾಯ್ದೆ ವಿರೊಧಿಸಿ ಅಲಿಘಡ್ ಮುಸ್ಲಿಂ ವಿವಿ ಹಾಗೂ ಜಾಮಿಯಾ ಮಿಲಿಯಾ ಯುನಿವರ್ಸಿಟಿ ವಿದ್ಯಾರ್ಥಿಗಳು ದೆಹಲಿಯಲ್ಲಿ ಪ್ರತಿಭಟನಾ ರ್ಯಾಲಿ ಕೈಗೊಂಡಿದ್ದರು.ಈ ವೇಳೆ ವಿದ್ಯಾರ್ಥಿಗಳ ರ್ಯಾಲಿಗೆ ಪೊಲೀಸರು ತಡೆಯೋಡಿದ್ದಾರೆ. ಆಗ ಪೋಲೀಸರು ಹಾಗೂ ವಿದ್ಯಾರ್ಥಿಗಳ ಮಧ್ಯೆ ಘರ್ಷಣೆ ನಡೆದಿದ್ದು ಗಲಾಟೆ ಹಿಂಸಾಚಾರಕ್ಕೆ ತಿರುಗಿ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.
ಇದರ ಮಧ್ಯೆ ಉದ್ರಿಕ್ತರ ಗುಂಪೊಂದು ನಾಲ್ಕು ಬಸ್ ಗಳಿಗೆ ಬೆಂಕಿ ಹಚ್ಚಿದ್ದು ಸದ್ಯ ದೆಹಲಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.