ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ಸುನೀಲ್ ಪುರಾಣಿಕ ನೂತನ ಸಾರಥಿ

ಬೆಂಗಳೂರು: ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರ ಸ್ಥಾನಕ್ಕೆ ನಟ-ನಿರ್ದೇಶಕ ಸುನೀಲ್ ಪುರಾಣಿಕ್ ನೇಮಕಗೊಂಡಿದ್ದಾರೆ. ಈ ಹಿಂದೆ ಅಧ್ಯಕ್ಷರಾಗಿ ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಕಾರ್ಯ ನಿರ್ವಹಿಸಿದ್ದರು.

ಕಿರುತೆರೆಯಲ್ಲಿ ಹಲವು ವರ್ಷಗಳ ಅನುಭವ ಹೊಂದಿರುವ ಸುನೀಲ್ ಪುರಾಣಿಕ್ ಅವರಿಗೆ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ತಕ್ಷಣ ಜಾರಿಗೆ ಬರುವಂತೆ ಸರ್ಕಾರ ಆದೇಶ ಹೊರಡಿಸಿರುವ ಹಿನ್ನೆಲೆ ಇಂದು ಮಧ್ಯಾಹ್ನ 12.30ಕ್ಕೆ ಅಧಿಕಾರ ಸ್ವೀಕರ ಮಾಡಲಿದ್ದಾರೆ. ನಂದಿನಿ ಬಡಾವಣೆಯಲ್ಲಿರುವ ಚಲನಚಿತ್ರ ಅಕಾಡೆಮಿಯ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ.
 

50ಕ್ಕೂ ಹೆಚ್ಚು ಧಾರಾವಾಹಿಗಳಿಗೆ ನಿರ್ದೇಶನ ಮಾಡಿರುವ ಹೆಗ್ಗಳಿಕೆಗೆ ಸುನಿಲ್ ಅವರದು. ಅವುಗಳಲ್ಲಿ ವಾರದ ಮತ್ತು ದೈನಂದಿನ ಧಾರಾವಾಹಿಗಳೂ ಸೇರಿವೆ. ಸಿನಿಮಾಗಳಲ್ಲಿಯೂ ಇವರು ನಟಿಸಿದ್ದಾರೆ.